ತೆಂಗು ಬೆಳೆಗಾರರ ರಕ್ಷಣೆಗೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Vatal

ಬೆಂಗಳೂರು, ಆ.14-ಬೆಲೆ ಕುಸಿತದಿಂದ ತೆಂಗು ಬೆಳೆಗಾರರು ಕಂಗಾಲಾಗಿದ್ದು, ಬೆಳೆಗಾರರ ರಕ್ಷಣೆಗೆ ಸರ್ಕಾರ ಧಾವಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಈಡುಗಾಯಿ ಹೊಡೆಯುವ ಮೂಲಕ ಪ್ರತಿಭಟನೆ ಮಾಡಿದರು.  ತೆಂಗಿನ ಕಾಯಿ ಬೆಲೆ ಕುಸಿದಿದೆ. ಕೊಬ್ಬರಿ ಬೆಲೆ ಪಾತಾಳಕ್ಕೆ ಇಳಿದಿದೆ. ಇದನ್ನು ಅವಲಂಬಿಸಿದವರ ಬದುಕು ಕಂಗೆಟ್ಟಿದೆ. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ರಾಜ್ಯಾದ್ಯಂತ ಇರುವ ತೆಂಗು ಬೆಳೆಗಾರರು ಬೀದಿ ಪಾಲಾಗಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.
ತುಮಕೂರು, ತಿಪಟೂರು, ಶಿವಮೊಗ್ಗ, ಮಂಗಳೂರು, ಕರಾವಳಿ ಪ್ರದೇಶಗಳಲ್ಲಿ ತೆಂಗು ಬೆಳೆದು ಬದುಕುವ ಜನರಿದ್ದಾರೆ. ಬೆಲೆ ಕುಸಿತದಿಂದ ಎಲ್ಲರಿಗೂ ತೊಂದರೆಯಾಗುತ್ತಿದೆ. ಸರ್ಕಾರ ತೆಂಗಿಗೆ ಬೆಂಬಲ ಬೆಲೆ ಘೋಷಿಸಬೇಕೆಂದು ವಾಟಾಳ್ ಆಗ್ರಹಿಸಿದರು.  ತೆಂಗಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು. ತೆಂಗಿನ ಉಪ ಉತ್ಪನ್ನಗಳನ್ನು ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin