ತೆಂಗು ಹಾಗೂ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಅನಂತಕುಮಾರ್ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Anat-Kumarಬೆಂಗಳೂರು,ಆ.19-ಬೆಲೆ ಕುಸಿತದಿಂದ ತತ್ತರಿಸಿರುವ ರಾಜ್ಯದ ತೆಂಗು ಹಾಗೂ ಅಡಿಕೆ ಬೆಳೆಗಾರರ ನೆರವಿಗೆ ಧಾವಿಸುವಂತೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.  ಈ ಸಂಬಂಧ ಕೇಂದ್ರ ಕೃಷಿ ಇಲಾಖೆಯ ಉನ್ನತಾಧಿಕಾರಿಗಳ ಜತೆ ಚರ್ಚೆ ನಡೆಸಿರುವ ಅನಂತಕುಮಾರ್ ಆಗಸ್ಟ್ 24ರ ಬುಧವಾರ ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ಅವರ ಜತೆ ವಿಸ್ತ್ರತ ಚರ್ಚೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.  ಆಗಸ್ಟ್ 17 ರಂದು ನಡೆಯಬೇಕಿದ್ದ ಕೇಂದ್ರ ಸಚಿವ ಸಂಪುಟ ಸಭೆ ರದ್ದಾದ ಹಿನ್ನೆಲೆಯಲ್ಲಿ ಕೃಷಿ ಸಚಿವಾಲಯದ ಉನ್ನತಾಧಿಕಾರಿಗಳನ್ನು ಭೇಟಿ ಮಾಡಿದ ಅನಂತಕುಮಾರ್,ರಾಜ್ಯದ ಅಡಿಕೆ ಹಾಗೂ ತೆಂಗು ಬೆಳೆಗಾರರ ದುಃಸ್ಥಿತಿಯ ಕುರಿತು ವಿವರ ನೀಡಿದರು.

ಅಡಿಕೆ ಹಾಗೂ ತೆಂಗಿನ ಬೆಲೆ ಕುಸಿತದಿಂದ ಈಗಾಗಲೇ ಸಾಲ ಮಾಡಿಕೊಂಡಿರುವ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು ತಕ್ಷಣವೇ ಅವರ ನೆರವಿಗೆ ಧಾವಿಸಲು ಅಗತ್ಯವಾದ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮನವಿ ಮಾಡಿಕೊಂಡರು ಎಂದು ಮೂಲಗಳು ಹೇಳಿವೆ.  ಆಗಸ್ಟ್ 24ರ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ಅವರ ಜತೆ ಮಾತುಕತೆ ನಡೆಸಲಿರುವ ಅನಂತಕುಮಾರ್,ರಾಜ್ಯದ ಅಡಿಕೆ,ತೆಂಗು ಬೆಳೆಗಾರರ ನೆರವಿಗೆ ಬರಬೇಕು,ಬೆಂಬಲ ಬೆಲೆ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಿದ್ದಾರೆ. ಅಡಿಕೆ ಹಾಗೂ ತೆಂಗು ಬೆಳೆಯ ಬೆಲೆ ಕುಸಿತದಿಂದ ಕಂಗೆಟ್ಟ ರಾಜ್ಯದ ರೈತರು ತಮ್ಮ ನೆರವಿಗೆ ಬರುವಂತೆ ರಾಜ್ಯ ಸರ್ಕಾರದ ಮೊರೆ ಹೋದಾಗ,ಅವರು ತಕ್ಷಣವೇ ಸದನದ ಸರ್ವ ಪಕ್ಷಗಳ ನಾಯಕರು ಹಾಗೂ ಸಂಸದರ ಸಭೆ ಕರೆದಿದ್ದರು.

ಹನ್ನೆರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಡಿಕೆ ಹಾಗೂ ತೆಂಗು ಬೆಳೆಗಾರರು ಬೆಲೆ ಕುಸಿತದಿಂದ ತತ್ತರಿಸಿರುವ ರೀತಿಯ ಕುರಿತು ವಿವರಿಸಿದಾಗ,ಈ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವುದಾಗಿ ಅನಂತಕುಮಾರ್ ಅವರು ಭರವಸೆ ನೀಡಿದ್ದರು.  ಆಗಸ್ಟ್ 17 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು ಈ ಸಂದರ್ಭದಲ್ಲಿ ಸಚಿವ ರಾಧಾ ಮೋಹನ್ ಸಿಂಗ್ ಅವರಿಗೆ ರಾಜ್ಯದ ಅಡಿಕೆ ಹಾಗೂ ತೆಂಗು ಬೆಳೆಗಾರರ ಸಂಕಷ್ಟವನ್ನು ವಿವರಿಸುವುದಾಗಿ ಹೇಳಿದ್ದರು

► Follow us on –  Facebook / Twitter  / Google+.

Facebook Comments

Sri Raghav

Admin

Comments are closed.