ತೆರ್ನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಈ ಸುದ್ದಿಯನ್ನು ಶೇರ್ ಮಾಡಿ

Anjaneya-Temple--01

ಕೋಲಾರ, ಮಾ.26-ತಾಲ್ಲೂಕಿನ ತೆರ್ನಹಳ್ಳಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಕಿಡಿಗೇಡಿಗಳು ಬೆಂಕಿಹಚ್ಚಿರುವ ಘಟನೆ ತಡರಾತ್ರಿ ನಡೆದಿದೆ. ಪುರಾತನ ಕಾಲದ ಈ ದೇವಾಲಯಕ್ಕೆ ಬೆಂಕಿ ಹಾಕಿ ವಿಗ್ರಹವನ್ನು ವಿರೂಪಗೊಳಿಸಲಾಗಿದೆ. ದೇವಾಲಯಕ್ಕೆ ಬೆಂಕಿ ಹಾಕಿರುವುದು ಅನೇಕ ಅನುಮಾನ ಮೂಡಿಸಿದೆ.   ಚಂದ್ರಪ್ಪ ಎಂಬುವರ ಜಮೀನಿನಲ್ಲಿದ್ದ ದೇವಾಲಯದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳು ದೇವರ ವಿಗ್ರಹವನ್ನು ಕಿತ್ತು ಹಾಕಿದ್ದಾರೆ. ಜಮೀನು ವಿವಾದದ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಬೆಂಕಿ ಹಾಕಿರಬಹುದೆಂದು ಶಂಕಿಸಲಾಗಿದ್ದು, ಈ ಘಟನೆಯಿಂದ ತೆರ್ನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತರು ಆಕ್ರೋಶಗೊಂಡಿದ್ದಾರೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin