ತೆಲಂಗಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ತಂಡದಲ್ಲಿ ಸತೀಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

Satish-Jarakihole

ಬೆಂಗಳೂರು, ಆ.1-ಇತ್ತೀಚೆಗೆ ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡ ಮಾಜಿ ಸಚಿವ ಸತೀಶ್ ಜಾರಕಿ ಹೊಳಿ ಅವರಿಗೆ ತೆಲಂಗಾಣ ಕಾಂಗ್ರೆಸ್‍ನ ಉಸ್ತುವಾರಿಯ ಹೊಣೆ ವಹಿಸಲಾಗಿದೆ. ನೂತನ ರಾಜ್ಯ ತೆಲಂಗಾಣ ಕಾಂಗ್ರೆಸ್‍ನ ಸಂಘಟನೆ ಉಸ್ತುವಾರಿಗಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆರ್.ಸಿ.ಕುಂಟಿಯಾ ಅವರನ್ನು ನಿಯೋಜಿಸಲಾಗಿದ್ದು, ಕಾರ್ಯದರ್ಶಿಯಾಗಿರುವ ಸತೀಶ್ ಜಾರಕಿ ಹೊಳಿ ಅವರನ್ನು ಕುಂಟಿಯಾ ಅವರೊಂದಿಗೆ ನೇಮಿಸಲಾಗಿದೆ.

ಸತೀಶ್ ಜಾರಕಿಹೊಳಿ ರಾಜ್ಯರಾಜಕಾರಣದಲ್ಲಿ ಬೇಸರಗೊಂಡು ಪರ್ಯಾಯ ದಾರಿಯತ್ತ ಚಿಂತನೆ ನಡೆಸಿದ್ದರು. ಒಂದು ಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿದ್ದ ಸತೀಶ್ ಜಾರಕಿಹೊಳಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಚಿವರಾಗಿ ನೇಮಕಗೊಂಡಿದ್ದರು. 13 ಮಂದಿಯನ್ನು ಸಚಿವರನ್ನು ಕೈಬಿಡುವಾಗ ಸಿದ್ದರಾಮಯ್ಯ ಅವರನ್ನು ಸತೀಶ್ ಜಾರಕಿಹೊಳಿ ಅವರನ್ನೂ ಕೈಬಿಟ್ಟು ಅವರ ಸಹೋದರ ರಮೇಶ್‍ಜಾರಕಿ ಹೊಳಿ ಅವರನ್ನು ಸಂಪುಟಕ್ಕೆ ತೆಗೆದುಕೊಂಡರು.

ಜೊತೆಗೆ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕೈ ಮೇಲಾಗಿದ್ದರಿಂದ ಇನ್ನಷ್ಟು ಅಸಮಾಧಾನಗೊಂಡಿದ್ದ ಸತೀಶ್ ಜಾರಕಿಹೊಳಿ ಕಾಂಗ್ರೆಸ್‍ನಿಂದ ದೂರವಾಗುವ ಹಂತದಲ್ಲಿದ್ದಾಗಲೇ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಅವರು ದೆಹಲಿಗೆ ಕರೆಸಿಕೊಂಡು ಸಮಾಧಾನಮಾಡಿದ್ದರು. ಜೊತೆಗೆ ಎಐಸಿಸಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಈಗ ತೆಲಂಗಾಣ ರಾಜ್ಯದ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin