ತ್ಯಾಗಬಲಿದಾನ ಮಾಡಿದ ಹೋರಾಟಗಾರರ ಸ್ಮರಣೆ ನಮ್ಮೆಲ್ಲರ ಹೊಣೆ

ಈ ಸುದ್ದಿಯನ್ನು ಶೇರ್ ಮಾಡಿ

kr-nagar

ಕೆ.ಆರ್.ನಗರ,ಆ.11- ಭಾರತವನ್ನು ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಗೊಳಿಸಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ತ್ಯಾಗ ಮತ್ತು ಬಲಿದಾನ ಮಾಡಿದ ಹೋರಾಟಗಾರರನ್ನು ಸದಾ ಸ್ಮರಣೆ ಮಾಡಬೇಕಾದುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಸಿ.ಶಿವಕುಮಾರ್ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯ ಮುಂಭಾಗ ಪ್ರಭಾತ್ ಬೇರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಲಕ್ಷಾಂತರ ಮಂದಿ ಭಾರತೀಯರು ತಮ್ಮ ಪ್ರಾಣ ತೆರಬೇಕಾಯಿತು. ಆದ್ದರಿಂದ ಅವರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ತಿಳಿಸಿದರು.
ಬಿಜೆಪಿ ಕಚೇರಿಯ ಮುಂಭಾಗದಿಂದ ತ್ರಿವರ್ಣ ಧ್ವಜ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದೊಂದಿಗೆ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಸಾರ್ವಜನಿಕ ಉದ್ಯಾನವನದಲ್ಲಿರುವ ಮಹಾತ್ಮಾಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಘೋಷಣೆ ಕೂಗಿದರು. ಜಿಲ್ಲಾ ಖಜಾಂಚಿ ಡಾ.ದೇವಪಾಲ್, ತಾಲೂಕು ಉಪಾಧ್ಯಕ್ಷ ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ವಿ.ಗುಡಿಜಗದೀಶ್, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮುಕ್ಕೋಟಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ತಮ್ಮಣ್ಣ, ಮುಖಂಡರಾದ ಬಸ್‍ಕುಮಾರ್, ಬಸವರಾಜು, ಪ್ರಾಣೇಶ್, ಗೋಪಾಲರಾಜು, ಆನಂದ್, ಉಮಾಕಾಂತರಾವ್, ಚಂದಗಾಲುಸೋಮು, ಮಹೇಶ್, ಸೌತನಹಳ್ಳಿಸಣ್ಣಪ್ಪ ಮತ್ತಿತರರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin