ತ್ರಿವಳಿ ತಲಾಕ್ ಸಂವಿಧಾನ ಬಾಹಿರ : ಅಲಹಬಾದ್ ಹೈಕೋರ್ಟ್ ಮಹತ್ವದ ತೀರ್ಪು
ಅಲಹಬಾದ್,ಡಿ.8-ತ್ರಿವಳಿ ತಲಾಕ್ ಪದ್ಧತಿಯು ಸಂವಿಧಾನ ಬಾಹಿರ ಎಂದು ಅಲಹಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡುವ ಮೂಲಕ ಮುಸ್ಲಿಂ ಮಹಿಳೆಯರ ರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಮಹಿಳೆಯರಿಗೆ ತ್ರಿವಳಿ ತಲಾಕ್ ನೀಡುವುದು ಕ್ರೂರತೆಯಾಗಿದೆ. ಇದರಿಂದ ಸಂವಿಧಾನಾತ್ಮಕ ಅಧಿಕಾರಿಗಳು ಹರಣವಾಗುತ್ತವೆ ಎಂದು ಉತ್ತರ ಪ್ರದೇಶ ಹೈಕೋರ್ಟ್ ಪೀಠ ಐತಿಹಾಸಿಕ ತೀರ್ಪು ನೀಡುವ ಮೂಲಕ ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕೆ ಹೊಸ ಮುನ್ನುಡಿ ಬರೆದಿದೆ. ತ್ರಿವಳಿ ತಲಾಕ್ ಪದ್ಧತಿಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಇಬ್ಬರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಅವುಗಳ ವಿಚಾರಣೆ ನಡೆಸಿದ ಹೈಕೋರ್ಟ್ನ ಪೀಠ ಈ ಪದ್ಧತಿ ಸಂವಿಧಾನ ಬಾಹಿರ ಎಂದು ಸ್ಪಷ್ಟ ಮಾತುಗಳಲ್ಲಿ ಘೋಷಿಸಿತು.
ಯಾವುದೇ ವೈಯಕ್ತಿಕ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ. ತ್ರಿವಳಿ ತಲಾಕ್ನಿಂದ ಮುಸ್ಲಿಂ ಮಹಿಳೆಯರ ಹಕ್ಕುಗಳು ಉಲ್ಲಂಘನೆಯಾಗುತ್ತದೆ. ಇದೊಂದು ಅತ್ಯಂತ ಕ್ರೂರ ಪದ್ಧತಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… : Eesanje News 24/7 ನ್ಯೂಸ್ ಆ್ಯಪ್ – Click Here to Download