ತ್ರಿವಳಿ ತಲಾಖ್ ವಿಷಯವನ್ನು ರಾಜಕೀಯಗೊಳಿಸಬೇಡಿ : ಪ್ರಧಾನಿ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Modi-01

ನವದೆಹಲಿ, ಮೇ 10– ತ್ರಿವಳಿ ತಲಾಖ್ ವಿಷಯವನ್ನು ರಾಜಕೀಯಗೊಳಿಸಬೇಡಿ; ಹೀಗಂಥ ಮುಸ್ಲಿಂ ಸಮುದಾಯದ ಬಳಿ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ.  ದೇಶದಲ್ಲಿ ತ್ರಿವಳಿ ತಲಾಖ್ ಬಗ್ಗೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿ ಈ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಜಮಿಯತ್ ಉಲೇಮಾ ಇ ಹಿಂದ್ ನಾಯಕರ ಜತೆಗಿನ ಸಮಾಲೋಚನೆಯಲ್ಲಿ ಮೋದಿ ಈ ಅಭಿಪ್ರಾಯ ಹೊರಹಾಕಿದ್ದಾರೆ.  ತ್ರಿವಳಿ ತಲಾಖ್ ಪದ್ಧತಿ ತೊಡೆದು ಹಾಕಲೇ ಬೇಕು ಎನ್ನುವ ಹಠಕ್ಕೆ ಬಿದ್ದಿರುವ ಪ್ರಧಾನಿ ಮೋದಿ  ಮುಖಂಡರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ತ್ರಿವಳಿ ತಲಾಖ್ ವಿಚಾರದಲ್ಲಿ ರಾಜಕೀಯ  ಬೆರೆಸಬೇಡಿ ಎಂದು ಮೋದಿ ಮನವಿ ಮಾಡಿದ್ದಾರೆ.ವಿವಿಧತೆಯಲ್ಲಿ ಏಕತೆಯೇ ಭಾರತದ ವಿಶೇಷತೆ. ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ಈ ವಿಚಾರವನ್ನು ರಾಜಕೀಯಗೊಳಿಸಲು ಬಿಡಬಾರದು. ಈ ವಿಚಾರದ ಸುಧಾರಣೆಯಲ್ಲಿ ಮುಸ್ಲಿಂ ಸಮುದಾಯದ ನಿಯೋಗ ಜವಾಬ್ದಾರಿ ವಹಿಸಿಕೊಳ್ಳಬೇಕು,¿ ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ಹೇಳಿದರು.  ಇದಕ್ಕೂ ಮೊದಲು ಜಮಾತï ಇಸ್ಲಾಮಿ ಹಿಂದï ಸಂಘಟನೆ ಮುಸ್ಲಿಂ ಧಾರ್ಮಿಕ ನಿಯಮವನ್ನು ಮುರಿಯಲು ಯಾವುದೇ ಸರ್ಕಾರಕ್ಕೂ ಸಾಧ್ಯವಿಲ್ಲ ಎಂದಿತ್ತು. ಇದರ ಬದಲು ಮುಸ್ಲಿಮರನ್ನು ಸುಶಿಕ್ಷಿತರಾಗಿ ಮಾಡಬೇಕು. ಶೆರಿಯತ್ ಕಾನೂನಿನ ಬಗ್ಗೆ ತಿಳುವಳಿಕೆ ನೀಡಬೇಕು ಎನ್ನುವ ಮೂಲಕ ತ್ರಿವಳಿ ತಲಾಖï ನಿಷೇಧವನ್ನು ಪರೋಕ್ಷವಾಗಿ ವಿರೋಧಿಸುತ್ತಿದೆ.

ಇನ್ನು ನಿಯೋಗದ ಸದಸ್ಯರು ತ್ರಿವಳಿ ತಲಾಖ್ ವಿಚಾರದಲ್ಲಿ ಪ್ರಧಾನ ಮಂತ್ರಿಯವರ ನಿಲುವುಗಳನ್ನು ಮೆಚ್ಚಿಕೊಂಡಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.  ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ‘ನವ ಭಾರತ’ ನಿರ್ಮಾಣದಲ್ಲಿ ಮುಸ್ಲಿಂ ಸಮುದಾಯ ಕೈಜೋಡಿಸಬೇಕು ಎಂದು ಕೋರಿಕೊಂಡರು.  ಇನ್ನು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ, ದೇಶದ ಭದ್ರತೆ ಹಾಗೂ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ಸಂದರ್ಭದಲ್ಲೂ ಮುಸ್ಲಿಂ ಸಮುದಾಯ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಈ ಸಂದರ್ಭದಲ್ಲಿ ಮುಸ್ಲಿಮರ ನಿಯೋಗ ದೇಶದ ವಿರುದ್ಧ ಯಾವುದೇ ಸಂಚು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿಯವರಿಗೆ ಭರವಸೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin