ತ್ರಿವೇಂದ್ರ ಸಿಂಗ್ ರಾವತ್ ಉತ್ತರಾಖಂಡ್ ನೂತನ ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Tivendra-Singh

ಡೆಡ್ರಾಡೂನ್, ಮಾ.17-ಆರ್‍ಎಸ್‍ಎಸ್ ಮಾಜಿ ಪ್ರಚಾರಕ ತ್ರಿವೇಂದ್ರಸಿಂಗ್ ರಾವತ್ ಅವರನ್ನು ಉತ್ತರಾಖಂಡ್‍ನ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ರಾವತ್ ಅವರಿಗೆ ಮಾಹಿತಿ ನೀಡಲಾಗಿದ್ದು, ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಆಯ್ಕೆಯಾಗಲಿದ್ದಾರೆ.  ಚುನಾಯಿತರಾದ ಬಿಜೆಪಿ ಶಾಸಕರು ಇಂದು ಸಭೆ ಸೇರಲಿದ್ದಾರೆ. ಕೇಂದ್ರದ ವೀಕ್ಷಕರೂ ಆದ ಸಚಿವ ನರೇಂದ್ರಸಿಂಗ್ ತೋವರ್, ಪಕ್ಷದ ಪ್ರಧಾನ ಕಾರ್ಯದರ್ಶಿ ಸರೋಜ್ ಪಾಂಡೆ, ರಾಜ್ಯದ ಚುನಾವಣಾ ಉಸ್ತುವಾರಿ ಹೊಣೆ ಹೊತ್ತಿದ್ದ ಧರ್ಮೆಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಮುಖಂಡ ಶ್ಯಾಮ್‍ಜಾಜು ಸಭೆಯಲ್ಲಿ ಭಾಗವಹಿಸುವರು.

ರಾಜಧಾನಿ ಡೆಡ್ರಾಡೂನ್‍ನಲ್ಲಿ ನಾಳೆ ಅಪರಾಹ್ನ 3 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್ ಶಾ ಮತ್ತಿತರರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಘಟಕದ ಅಧ್ಯಕ್ಷ ಅಜಯ್ ಭಟ್ ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin