ದಂಪತಿ ಮೇಲೆ ಹಲ್ಲೆ ನಡೆಸಿ ದರೋಡೆ

ಈ ಸುದ್ದಿಯನ್ನು ಶೇರ್ ಮಾಡಿ

robbry

ಹುಣಸೂರು, ಆ.22-ಮನೆಗೆ ನುಗ್ಗಿದ ಆರು ಮಂದಿ ದರೋಡೆಕೋರರ ತಂಡ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 60 ಗ್ರಾಂ ಚಿನ್ನ ಹಾಗೂ 25 ಸಾವಿರ ನಗದು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಸಿದ್ದನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ದರೋಡೆಕೋರರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಕೊಪ್ಪಲಿನ ನಾಗರತ್ನ ಮತ್ತು ಬಾಲಗೋಪಾಲ್ ದಂಪತಿಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಲಗೋಪಾಲ್‍ರ ಸ್ಥಿತಿ ಚಿಂತಾಜನಕವಾಗಿದೆ.
ನಿನ್ನೆ ಸಂಜೆ ಏಕಾಏಕಿ ಮನೆಗೆ ನುಗ್ಗಿದ ದರೋಡೆಕೋರರು ರಾಡ್‍ನಿಂದ ದಂಪತಿ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಅಭಿನವ್ ಖರೆ ಭೇಟಿ ನೀಡಿ ಪರಿಶೀಲನೆ ನಡೆಸಿ ದರೋಡೆಕೋರರ ಪತ್ತೆಗೆ ಎಎಸ್‍ಪಿ ಹರೀಶ್‍ಪಾಂಡೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin