ದಕ್ಷಿಣ ಕನ್ನಡ ಬಂದ್, ಹಿಂಸಾಚಾರ, ಕಲ್ಲುತೂರಾಟ, ಹಲವರ ಬಂಧನ, ಜನರ ಪರದಾಟ

ಈ ಸುದ್ದಿಯನ್ನು ಶೇರ್ ಮಾಡಿ

Mangaluru--01

ಮಂಗಳೂರು,ಫೆ.25-ದಕ್ಷಿಣ ಕನ್ನಡ ಜಿಲ್ಲಾ ಬಂದ್ ಹಿಂಸಾಚಾರಕ್ಕೆ ತಿರುಗಿದ್ದು, ಹಲವೆಡೆ ಸಾರಿಗೆ ಸಂಸ್ಥೆಯ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಲಾರಿಯೊಂದಕ್ಕೆ ಬೆಂಕಿ ಹಚ್ಚಿದ್ದು ಬಿಗು ಪರಿಸ್ಥಿತಿ ಉಂಟಾಗಿದೆ.   ಕೇರಳದಲ್ಲಿ ಸಿಪಿಎಂ ಆಡಳಿತದಲ್ಲಿ ಹಿಂದೂಗಳ ಕಗ್ಗೊಲೆ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂಗಳು ದಕ್ಷಿಣ ಕನ್ನಡ ಜಿಲ್ಲಾ ಬಂದ್‍ಗೆ ಕರೆ ನೀಡಿರುವ ಸಂದರ್ಭದಲ್ಲೇ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ರ್ಯಾಲಿಯೊಂದರಲ್ಲಿ ಪಾಲ್ಗೊಳ್ಳಲು ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಕೇರಳ ಸಿಎಂ ಭೇಟಿ ವಿರೋಧಿಸಿ ಬಂದ್‍ಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ನಡುವೆಯೂ ಬಂದ್ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಒಂಭತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ.   ಇಂದು ಮುಂಜಾನೆ ವಿಟ್ಲಾ-ಮಂಗಳೂರು ರಸ್ತೆಯಲ್ಲಿರುವ ಒಕ್ಕೆತ್ತೂರಿನಲ್ಲಿ ಲಾರಿಗೆ ಬೆಂಕಿ ಹಚ್ಚಿದ್ದು, ಭಾಗಶಃ ಸುಟ್ಟುಹೋಗಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.   ಬಿಸಿರೋಡ್‍ನ ತುಂಬೆ, ತಲಪಾಡಿ, ಬಂಟ್ವಾಳ ತಾಲ್ಲೂಕಿನ ವಿಟ್ಲ , ಕುಲಶೇಖರ, ಮಂಗಳೂರು ಸಾರಿಗೆ ಸಂಸ್ಥೆಯ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದಾಗಿ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿ ಪ್ರಥಮ ಪಿಯು ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಪರದಾಡುವಂತಾಯಿತು.

ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯಲ್ಲಿ ಚಿಕ್ಕಮಗಳೂರು -ಮಂಗಳೂರು ಹೆದ್ದಾರಿಯಲ್ಲಿ ದುಷ್ಕರ್ಮಿಗಳು ರಸ್ತೆಗೆ ಮರದ ದಿಮ್ಮಿಯನ್ನು ಅಡ್ಡ ಹಾಕಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಮರದ ದಿಮ್ಮಿಯನ್ನು ತೆರವುಗೊಳಿಸಿದರು.   ಮಂಗಳೂರು ನಗರದ ಕಂಕನಾಡಿಯಲ್ಲಿ ಬಸ್‍ಗೆ ಕಲ್ಲು ತೂರಿದ ಆರು ಮಂದಿಯನ್ನು ಪೊಲೀಸರು ಬಂಧಿಸಲಾಗಿದೆ. ಇದೇ ವೇಳೆ ಪಡಿಲ್‍ನಲ್ಲಿ ಟೈರ್‍ಗಳಿಗೆ ಬೆಂಕಿ ಹಚ್ಚಲು ಯತ್ನಿಸಿದ ಇಬ್ಬರನ್ನು ಬಂಧಿಸಿದ್ದಾರೆ.

ಕೇರಳ-ಕರ್ನಾಟಕ ಗಡಿಪ್ರದೇಶ ತೂಮಿನಾಡು ಮತ್ತು ಕೋಟೆಕಾರು ಬೀರಿ ಸಮೀಪ ಕೇರಳದ ಎರಡು ಸಾರಿಗೆ ಬಸ್‍ಗಳಿಗೆ ದುಷ್ಕರ್ಮಿಗಳು ನಿನ್ನೆ ರಾತ್ರಿಯೂ ಕಲ್ಲು ತೂರಿ ಹಾನಿ ಮಾಡಿದ್ದಾರೆ. ಪೊಲೀಸರ ಬಿಗಿಬಂದೋಬಸ್ತ್ ನಡುವೆಯೂ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದು , ಉಲ್ಲಾಳ ಹಾಗೂ ಮಂಜೇಶ್ವರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.   ಬಂದ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಖಾಸಗಿ ಬಸ್‍ಗಳ ಸಂಚಾರ ವಿರಳವಾಗಿದ್ದು , ಸಾರಿಗೆ ಸಂಸ್ಥೆಯ ಬಸ್‍ಗಳು ಮಾತ್ರ ಸಂಚರಿಸುತ್ತಿವೆ. ನಗರ ವ್ಯಾಪ್ತಿಯಲ್ಲಿ ಅಂಗಡಿಮುಂಗಟ್ಟುಗಳು ಬಂದ್ ಆಗಿವೆ.
ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಗಿದೆ.

ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ ವ್ಯವಸ್ಥೆ ಮಾಡಿದ್ದು , ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳಲು ತೊಂದರೆಯಾದರೆ ಬಸ್ ವ್ಯವಸ್ಥೆ ಮಾಡುವುದಾಗಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಕೆಎಸ್‍ಆರ್‍ಟಿಸಿ ಅಧಿಕಾರಿಗಳು, ಖಾಸಗಿ ಬಸ್ ಮಾಲೀಕರೊಡನೆ ನಿನ್ನೆ ಸಭೆ ನಡೆಸಲಾಗಿದ್ದು , ಈ ಸಂಬಂಧ ಚರ್ಚಿಸಲಾಗಿದೆ. ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಖಾಸಗಿ ಬಸ್ ಮಾಲೀಕರು ಸಂಚಾರ ಸ್ಥಗಿತಗೊಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಅವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಗಿಭದ್ರತೆ:

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ರೈಲಿನಲ್ಲಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೈಲು ನಿಲ್ದಾಣದ ಸುತ್ತಮುತ್ತ ಬಿಗಿ ಪೆÇಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ಎಡಿಜಿಪಿ ಅಲೋಕ್‍ಕುಮಾರ್ ಅವರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin