ದತ್ತಮಾಲಾ ಕಾರ್ಯಕ್ರಮ ಪ್ರಾರಂಭ : ಸಿ.ಟಿ. ರವಿ ಭಾಗಿ

ಈ ಸುದ್ದಿಯನ್ನು ಶೇರ್ ಮಾಡಿ

Dattamala-01

ಚಿಕ್ಕಮಗಳೂರು,ಡಿ.4- ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಮ್ಮಿಕೊಂಡಿರುವ ದತ್ತಮಾಲಾ ಕಾರ್ಯಕ್ರಮ ಇಂದು ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. ಇಂದಿನಿಂದ ಡಿ.14ರವರೆಗೆ ದತ್ತಾತ್ರೇಯ ವ್ರತಾಚರಣೆ ಮಾಡುವ ಅಂಗವಾಗಿ ವಿಶ್ವ ಹಿಂದೂ ಪರಿಷತ್‍ನ ಉಪಾಧ್ಯಕ್ಷ ಪ್ರೇಮಕಿರಣ್, ನಗರಾಧ್ಯಕ್ಷ ಮನೋಹರ್ ಭಜರಂಗ ದಳದ ಕೃಷ್ಣ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸೇರಿದಂತೆ ನೂರಾರು ಮಂದಿ ಇಂದು ದತ್ತಮಾಲೆ ಧರಿಸಿದರು. ಡಿ.11ರಂದು ಅನುಸೂಯ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಅಂದು ಬೋಳರಾಮೇಶ್ವರ ದೇವಸ್ಥಾನದಿಂದ ಮಹಿಳೆಯರಿಂದ ಸಂಕೀರ್ತನ ಯಾತ್ರೆ ನಡೆಯಲಿದೆ. ನಂತರ ಮಹಿಳೆಯರು ದತ್ತಪೀಠಕ್ಕೆ ತೆರಳಿ ಅನುಸೂಯ ದೇವಿಗೆ ಪೂಜೆ ಸಲ್ಲಿಸಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ.

ಶೋಭಾಯಾತ್ರೆ: ಡಿ.12ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಅಂದು ಮಧ್ಯಾಹ್ನ 2 ಗಂಟೆಗೆ ಕಾಮಧೇನು ಗಣಪತಿಯಿಂದ ಬಸವನಹಳ್ಳಿ ಮುಖ್ಯರಸ್ತೆ , ಎಂ.ಜಿ.ರಸ್ತೆ ಮೂಲಕ ಅಜಾದ್ ಪಾಕ್ ತಲುಪಿ ಅಲ್ಲಿ ಬೃಹತ್ ಧಾರ್ಮಿಕ ಸಭೆ ನಡೆಯಲಿದೆ. ಬಸವ ಮಂದಿರದ ಶ್ರೀ ಚಂದ್ರಶೇಖರ ಸ್ವಾಮೀಜಿ ಸಾನಿಧ್ಯವಹಿಸಲಿದ್ದು, ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಹಕಾರ್ಯದರ್ಶಿ ಡಾ.ಸುರೇಂದ್ರ ಕುಮಾರ್ ಜೈನ್ ಮುಖ್ಯ ಭಾಷಣ ಮಾಡಲಿದ್ದಾರೆ. ಡಿ.14ರಂದು ದತ್ತಪೀಠದಲ್ಲಿ ದತ್ತ ಜಯಂತಿ ಕಾರ್ಯಕ್ರಮ ಹಾಗೂ ದತ್ತಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.ರಾಜ್ಯದ ವಿವಿಧೆಡೆಯಿಂದ ಸುಮಾರು 20ಸಾವಿರಕ್ಕೂ ಹೆಚ್ಚು ದತ್ತಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರೇಮ್‍ಕಿರಣ್ ತಿಳಿಸಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin