ದರೋಡೆಕೋರರ ಪತ್ತೆಗೆ ನಾಲ್ಕು ತಂಡ ರಚನೆ : ಎಸ್ಪಿ

ಈ ಸುದ್ದಿಯನ್ನು ಶೇರ್ ಮಾಡಿ

robbery

ಚಿಕ್ಕಮಗಳೂರು, ಸೆ.27-ಮಣಪ್ಪುರಂ ಗೋಲ್ಡ್ ಫೈನಾನ್ಸ್ ಸಂಸ್ಥೆಯ ಟೆರೇಸ್ ಕೊರೆದು 13 ಕೆಜಿ ಚಿನ್ನಾಭರಣ, 8.14 ಲಕ್ಷರೂ. ನಗದು ದೋಚಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.ದರೋಡೆ ನಡೆದ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಶ್ವಾನದಳದೊಂದಿಗೆ ತೆರಲಿ ಪರಿಶೀಲನೆ ನಡೆಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂ. ಚಿನ್ನಾಭರಣ ಕಳುವಾಗಿರುವುದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಲ್ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಒಂದು ತಂಡ ರಚಿಸಲಾಗಿದ್ದು, ಬಿಸಿಬಿ, ಬಿಸಿಆರ್‍ಬಿ ಹಾಗೂ ಬಿಸಿಐಬಿ ಸಿಬ್ಬಂದಿ ನಾಲ್ಕು ವಿಶೇಷ ತಂಡಗಳನ್ನು ದರೋಡೆಕೋರರ ಶೋಧ ಕಾರ್ಯಕ್ಕೆ ನಿಯೋಜಿಸಿರುವುದಾಗಿ ತಿಳಿಸಿದರು.ದರೋಡೆ ನಡೆದಿರುವ ಸ್ಥಳದ ಸುತ್ತಮುತ್ತಲಿನ ಅಂಗಡಿಗಳಲ್ಲಿ ಹಾಕಲಾಗಿರುವ ಸಿಸಿ ಟಿವಿಗಳನ್ನು ಕೂಡಲೇ ವಶಪಡಿಸಿಕೊಳ್ಳಲಾಗಿದ್ದು, ಎಲ್ಲಾ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin