ದರೋಡೆ-ಕನ್ನಗಳವು ನಾಲ್ವರ ಸೆರೆ : 31 ಲಕ್ಷ ಮೌಲ್ಯದ ಆಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

darode

ಬೆಂಗಳೂರು,ಸೆ.23- ದರೋಡೆ, ಮನೆಗಳವು ಮಾಡುತ್ತಿದ್ದ ನಾಲ್ಕು ಮಂದಿ ಆರೋಪಿಗಳನ್ನು ಆರ್‍ಎಂಸಿ ಯಾರ್ಡ್ ಪೊಲೀಸರು ಬಂಧಿಸಿ 31 ಲಕ್ಷ ರೂ. ಬೆಲೆಯ 784 ಗ್ರಾಂ ಆಭರಣಗಳು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ರಮೇಶ್(31), ರಾಜೇಶ್(38), ಮನೋಜ್‍ಕುಮಾರ್(33), ಭಗವಾನ್ ಲಾಲ್(36) ಬಂಧಿತ ಆರೋಪಿಗಳು. ಇವರ ಬಂಧನದಿಂದ ಆರ್ ಎಂಸಿ ಯಾರ್ಡ್, ಕೆ.ಆರ್.ಪುರಂ, ರಾಜಗೋಪಾಲನಗರ, ಜ್ಞಾನ ಭಾರತಿ, ಕಾಮಾಕ್ಷಿಪಾಳ್ಯ ಹಾಗೂ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮೂರು ದರೋಡೆ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಸೆ.6ರಂದು ಆರ್‍ಎಂಸಿಯಾರ್ಡ್ ಪೊಲೀಸ್ ಠಾಣೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ರಮೇಶನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇನ್ನುಳಿದ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಈ ಮಾಹಿತಿ ಮೇರೆಗೆ ಇನ್ನುಳಿದ ಆರೋಪಿಗಳನ್ನು ಬಂಧಿಸಿದ್ದು , ಅವರಿಂದ 31 ಲಕ್ಷ ರೂ. ಬೆಲೆ ಬಾಳುವ 784 ಗ್ರಾಂ ಆಭರಣಗಳು, ಏಷ್ಯನ್ ಪೈಂಟ್, ಹಾಡ್‍ವೇರ್ ಫಿಟಿಂಗ್ ಮತ್ತು ಕೃತ್ಯಕ್ಕೆ ಬಳಿಸಿದ್ದ ಗೂಡ್ಸ್ ಟೆಂಪೋ  ವಾಹನ ಹಾಗೂ ಜುಪಿಟರ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಆರೋಪಿಗಳು ಮತ್ತೊಂದು ದೆಹಲಿ ತಂಡದ ಇತರೆ ಆರೋಪಿಗಳೊಂದಿಗೆ ಸೇರಿ ದರೋಡೆ, ಮನೆಗಳವು, ಗೋಡೌನ್ ಕಳ್ಳತನ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದ್ದು , ದೆಹಲಿ ತಂಡ ಆರೋಪಿಗಳನ್ನು ಬಂಧಿಸಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಮಾರ್ಗದರ್ಶನದಲ್ಲಿ ಇನ್‍ಸ್ಪೆಕ್ಟರ್ ಮೊಹಮ್ಮದ್ ಮುಕರಮ್ ಮತ್ತು ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin