ದರ್ಗಾ ಪ್ರವೇಶಕ್ಕೆ ಸ್ತ್ರೀಯರಿಗೆ ಅವಕಾಶ : ಬಾಂಬೆ ಹೈಕೋರ್ಟ್ ಚಾರಿತ್ರಿಕ ತೀರ್ಪು

ಈ ಸುದ್ದಿಯನ್ನು ಶೇರ್ ಮಾಡಿ

Darga

ಮುಂಬೈ, ಆ.26- ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿರುವ ಹಾಜಿ ಅಲಿ ದರ್ಗಾ ಪ್ರವೇಶಿಸಲು ಬಾಂಬೆ ಹೈಕೋರ್ಟ್ ಮಹಿಳೆಯರಿಗೆ ಅವಕಾಶ ನೀಡುವ ಮೂಲಕ ಇಂದು ಚಾರಿತ್ರಿಕ ತೀರ್ಪಿತ್ತಿದೆ. ಪುರುಷರ ಜತೆ ಮಹಿಳೆಯರೂ ದರ್ಗಾದ ಪವಿತ್ರ ಸ್ಥಳಕ್ಕೆ ತೆರಳಲು ಅನುಮತಿ ನೀಡಬೇಕು ಹಾಗೂ ಅವರ ರಕ್ಷಣೆಗೆ ಮಹಾರಾಷ್ಟ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನ್ಯಾಯಾಲಯ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ವಿ.ಎಂ.ಕಾನಡೆ ಮತ್ತು ರೇವತಿ ಮೋಹಿತೆ ದೆರೆ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ನೀಡಿದೆ.
ದರ್ಗಾದೊಳಗೆ ಪ್ರವೇಶಕ್ಕೆ ಮಹಿಳೆಯರ ಮೇಲೆ ನಿಷೇಧ ಹೇರುವುದು ಸಂವಿಧಾನದಲ್ಲಿ ತಿಳಿಸಿರುವಂತೆ ಓರ್ವ ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ವ್ಯತಿರಿಕ್ತವಾಗಿದೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ಭಾರತೀಯ ಮುಸ್ಲಿಂ ಮಹಿಳಾ ಆಂದೋಲನದ ನೂರ್ಜೆಹಾನ್ ನಿಯಾಜ್ ಮತ್ತು ಝಾಕಿಯಾ ಸೋಮನ್ ಈ ಸಂಬಂಧ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು 2012ರಿಂದಲೂ ವಾದ-ಪ್ರತಿವಾದಗಳು ನಡೆಯುತ್ತಿತ್ತು.  ಈ ಐತಿಹಾಸಿಕ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅರ್ಜಿದಾರರಲ್ಲಿ ಒಬ್ಬರಾದ ಝಾಕಿಯಾ, ಪವಿತ್ರ ಖುರಾನ್ ಮತ್ತು ಸಂವಿಧಾನದಂತೆ ನಮ್ಮ ಹಕ್ಕನ್ನು ಎತ್ತಿ ಹಿಡಿಯಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin