ದಲಿತರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿ ತೋರಿಸಲಿ : ರಾಮಲಿಂಗಾರೆಡ್ಡಿ ಸವಾಲು

ಈ ಸುದ್ದಿಯನ್ನು ಶೇರ್ ಮಾಡಿ

ramalinga

ಬೆಂಗಳೂರು,ಏ.3-ಬಿಜೆಪಿ ಪಕ್ಷದಲ್ಲಿ ದಲಿತರನ್ನು ಅಧ್ಯಕ್ಷರನ್ನಾಗಿ ಯಾರನ್ನು ಮಾಡಿದ್ದಾರೆ. ನಮ್ಮ ಪಕ್ಷದಲ್ಲಿ ಏಳು ವರ್ಷಗಳಿಂದ ದಲಿತ ನಾಯಕರು ಅಧ್ಯಕ್ಷರಾಗಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್‍ನಲ್ಲಿ ದಲಿತ ನಾಯಕರನ್ನು ಸಿದ್ದರಾಮಯ್ಯ ತುಳಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮುಂದಿನ ಟಾರ್ಗೆಟ್ ಎಂದು ಆರ್.ಅಶೋಕ್ ಹೇಳಿಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ ,ಬಿಜೆಪಿಯವರು ಒಬ್ಬ ದಲಿತರನ್ನು ನಾಯಕರನ್ನಾಗಿ ಮಾಡಿಲ್ಲ. ನಮ್ಮ ಪಕ್ಷದಲ್ಲಿ ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿದ್ದರು. ಈಗ ಪರಮೇಶ್ವರ್ 7 ವರ್ಷದಿಂದ ಅಧ್ಯಕ್ಷರಾಗಿದ್ದಾರೆ. ಅವರನ್ನು ಮುಂದುವರೆಸುವ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಮೊದಲು ಬಿಜೆಪಿಯವರು ದಲಿತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿ ತೋರಿಸಲಿ ಎಂದು ಸವಾಲು ಹಾಕಿದರು.

ಆರ್. ಅಶೋಕ್ ಹೇಳಿಕೆ ರಾಜಕೀಯ ಪ್ರೇರಿತವಾದದ್ದು. ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ನಂಜನಗೂಡಿನಲ್ಲಿ ಜೆಡಿಎಸ್ ಬೆಂಬಲ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿಗಿದೆ. ಹಾಗಾಗಿ ಎರಡೂ ಕ್ಷೇತ್ರಗಳಲ್ಲಿ ನಾವು ಸುಲಭವಾಗಿ ಗೆಲವು ಸಾಧಿಸಲಿದ್ದೇವೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin