ದಲಿತ ಅಧಿಕಾರಿ ಮೇಲೆ ದೌರ್ಜನ್ಯ ನಡೆಸಿದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

murthy

ಬೆಂಗಳೂರು, ಅ.25- ದಲಿತ ವರ್ಗದ ಅಧಿಕಾರಿ ಮುನಿ ವೀರಪ್ಪ ಅವರ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿ ಹಲ್ಲೆ ನಡೆಸಿ ದೌರ್ಜನ್ಯವೆಸಗಿರುವವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಇಂದು ಅಂಬೇಡ್ಕರ್ ಸೇನೆ ನಗರದ ಪುರಭವನದ ಬಳಿ ಪ್ರತಿಭಟನೆ ನಡೆಸಿತು.ರಾಜ್ಯಾಧ್ಯಕ್ಷ ಪಿ.ಮೂರ್ತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಲಿತ ಜನಾಂಗವನ್ನು ವ್ಯವಸ್ಥಿತವಾಗಿ ತುಳಿಯುವ ಹುನ್ನಾರ ಆದಿ ಕಾಲದಿಂದಲೂ ನಡೆಯುತ್ತಿದೆ. ಕಾರ್ಯಾಂಗ , ನ್ಯಾಯಾಂಗಗಳಲ್ಲಿ ಇದುವರೆಗೂ ದಲಿತರಿಗೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ.

ಇದರ ನಡುವೆ ಅಲ್ಲಲ್ಲಿ ಕೆಲವು ದಲಿತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದರು.ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಲಯದಲ್ಲಿ ಅಧಿಕಾರಿಯಾಗಿರುವ ಮುನಿ ವೀರಪ್ಪನವರ ಮೇಲೆ ಕೆಲವು ಸವರ್ಣೀಯರು ಅಕ್ರಮ ಕೂಟ ಕಟ್ಟಿಕೊಂಡು ಚಪ್ಪಲಿಯಿಂದ ಥಳಿಸಿ ಹೀನಾಮಾನವಾಗಿ ದೌರ್ಜನ್ಯ ನಡೆಸಿರುವುದು ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತಹ ವಿಚಾರ ಎಂದರು. ಅವರ ಮೇಲೆ ಹಲವು ಆರೋಪಗಳನ್ನು ಹೊರಿಸಿ ಏಕಾಏಕಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಲಾಗಿದೆ. ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸಿರುವವರನ್ನು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin