ದಸರಾ ಉದ್ಘಾಟನೆಗೆ ನಾಡೋಜ ಚನ್ನವೀರಕಣವಿ ಅವರಿಗೆ ನಾಳೆ ಅಧಿಕೃತ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

dasara--mysore

ಮೈಸೂರು, ಸೆ.2-ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ನಾಡೋಜ ಚನ್ನವೀರಕಣವಿ ಅವರನ್ನು ಆಹ್ವಾನಿಸುವ ಬಗ್ಗೆ ನಾಳೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ ಅವರು, ನಾಳೆ ಜಿಲ್ಲಾಡಳಿತ ವತಿಯಿಂದ ಧಾರವಾಡಕ್ಕೆ ತೆರಳಿ ಚನ್ನವೀರಕಣವಿಯವರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಅಕ್ಟೋಬರ್ 1 ರಂದು ಬೆಳಿಗ್ಗೆ 11.04 ನಿಮಿಷದಿಂದ 12 ಗಂಟೆಯೊಳಗೆ ಸಲ್ಲುವ ಶುಭ ಲಗ್ನದಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚನ್ನವೀರ ಕಣವಿ ಅವರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡುವರು.ಈ ಬಾರಿ ದಸರಾ ದಿನವೇ 14 ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿದ್ದು, ಚಿತ್ರೋತ್ಸವ, ಆಹಾರ ಮೇಳ, ದಸರಾ ಕ್ರೀಡಾಕೂಟ, ಕುಸ್ತಿ ಪಂದ್ಯಾವಳಿ, ದಸರಾ ಸಾಹಸ ಕ್ರೀಡಾ ಕೂಟ, ಫಲಪುಷ್ಪ ಪ್ರದರ್ಶನ, ವಸ್ತುಪ್ರದರ್ಶನ, ದಸರಾ ಪುಸ್ತಕ ಮೇಳ ಸೇರಿದಂತೆ ಒಟ್ಟು ಹದಿನಾಲ್ಕು ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ.
ಅಕ್ಟೋಬರ್ 1ರಿಂದ 9ರವರೆಗೆ ನಗರದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ  ಕಾರ್ಯಕ್ರಮಗಳು ನಡೆಯಲಿವೆ. ಅ.11 ರಂದು ನಂದಿಪೂಜೆ ನಂತರ ಜಂಬೂ ಸವಾರಿ ನಡೆಯಲಿದ್ದು, ಸಂಜೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ನಡೆಯಲಿದೆ. ಈ ವೇಳೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಗೌರವ ವಂದನೆ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin