ದಾಖಲೆ ಕೊಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಇನ್‍ಸ್ಪೆಕ್ಟರ್ ಎಸಿಬಿ ಬಲೆಗೆ

ಈ ಸುದ್ದಿಯನ್ನು ಶೇರ್ ಮಾಡಿ

inspector

ಮೈಸೂರು,ಅ.29- ದಾಖಲೆ ಕೊಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ತೂಕ ಮತ್ತು ಅಳತೆ ಇಲಾಖೆಯ ಇನ್‍ಸ್ಪೆಕ್ಟರ್ ಮಹದೇವಸ್ವಾಮಿ ಎಂಬುವರು ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಷರೀಫ್ ಎಂಬುವರಿಗೆ ದಾಖಲೆ ನೀಡಲು ಮಹದೇವಸ್ವಾಮಿ ಹಣಕ್ಕೆ ಬೇಡಿಕೆಯಿಟ್ಟಿದ್ದರಿಂದ ಷರೀಫ್ ಎಸಿಬಿಗೆ ದೂರು ನೀಡಿದ್ದರು. ನಿನ್ನೆ ಸಂಜೆ ಷರೀಫ್ ಅವರಿಂದ ಮಹದೇವಸ್ವಾಮಿ ಹಣ ಪಡೆದುಕೊಳ್ಳುತ್ತಿದ್ದಾಗ ಎಸಿಬಿ ಎಸ್‍ಪಿ ಕವಿತಾ ನೇತೃತ್ವದಲ್ಲಿ ದಾಳಿ ಮಾಡಿ ಮಹದೇವಸ್ವಾಮಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

 

 

► Follow us on –  Facebook / Twitter  / Google+

Facebook Comments

Sri Raghav

Admin