ದಾವಣಗೆರೆಯಲ್ಲಿ 3 ಅಂಗಡಿಗಳ ಶೆಟರ್ ಮುರಿದು ಸರಣಿ ಕಳ್ಳತನ

ಈ ಸುದ್ದಿಯನ್ನು ಶೇರ್ ಮಾಡಿ


ದಾವಣಗೆರೆ, ಏ.7- ನಗರದಲ್ಲಿ ಮತ್ತೆ ಕಳ್ಳರ ಹಾವಳಿ ಮುಂದುವರೆದಿದ್ದು, ಕಳೆದ ರಾತ್ರಿ ಮೂರು ಅಂಗಡಿಗಳ ರೋಲಿಂಗ್ ಶೆಟರ್ ಮುರಿದು ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ನಗರದ ಸ್ಟೇಡಿಯಂ ಸಮೀಪವಿರುವ ಸಪ್ತಗಿರಿ ಏಜೆನ್ಸಿ ಸೇರಿದಂತೆ ಮೂರು ಅಂಗಡಿಗಳ ಶೆಟರನ್ನು ಸಲಾಕೆಯಿಂದ ಮೀಟಿ ಅಂಗಡಿಯಲ್ಲಿದ್ದ ಕೆಲ ವಸ್ತುಗಳನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ.  ನಗರದಲ್ಲಿ ನಿರಂತರವಾಗಿ ಕಳ್ಳತನಗಳು ನಡೆಯುತ್ತಲೇ ಇವೆ. ನಿನ್ನೆ ಎರಡು ದೇವಸ್ಥಾನಗಳಲ್ಲಿ ಕಳ್ಳತನವಾಗಿದ್ದು, ರಾತ್ರಿ ಅಂಗಡಿಗಳಲ್ಲಿ ಕಳ್ಳತನವಾಗಿರುವುದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ.   ಸುದ್ದಿ ತಿಳಿದ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Davanagere--0141

Facebook Comments

Sri Raghav

Admin