ದಾವಣಗೆರೆ ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ದುರಂತ, 50 ಕ್ಕೂ ಹೆಚ್ಚು ಮಳಿಗೆಗಳು ಭಸ್ಮ

ಈ ಸುದ್ದಿಯನ್ನು ಶೇರ್ ಮಾಡಿ

Fire-01

ದಾವಣಗೆರೆ ಅ.31: ಇಲ್ಲಿನ ಎ.ಪಿ.ಎಂ.ಸಿ. ಮಾರುಕಟ್ಟೆಯಲ್ಲಿ ನಡೆದ ಭಾರೀ ಬೆಂಕಿ ದುರಂತದಲ್ಲಿ ಸುಮಾರು 50 ಕ್ಕೂ ಅಧಿಕ ಮಳಿಗೆಗಳು ಸಂಪೂರ್ಣ ಸುಟ್ಟು ಹೋಗಿವೆ. ಹೊಸ ಬಸ್ ನಿಲ್ದಾಣ ಎದುರಿನ ಎ.ಪಿ.ಎಂ.ಸಿ. ಪ್ರಾಂಗಣದಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾಣಿಸಿಕೊಂಡ ಬೆಂಕಿ, ವಾಣಿಜ್ಯ ಮಳಿಗೆಗಳಿಗೆ ಹೊತ್ತಿಕೊಂಡಿದೆ. ಇದರಿಂದಾಗಿ ಮಳಿಗೆಗಳಲ್ಲಿ ಇದ್ದ ಈರುಳ್ಳಿ ಮೊದಲಾದವು ಸುಟ್ಟು ಹೋಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. ರಾತ್ರಿ ಈ ಪ್ರದೇಶದಲ್ಲಿ ಯಾರೂ ಇಲ್ಲದ ಕಾರಣ, ಬೆಂಕಿ ತಗುಲಿದ್ದು, ತಕ್ಷಣಕ್ಕೆ ಗೊತ್ತಾಗಿಲ್ಲ. ಸುಮಾರು 2 ಗಂಟೆಗಳ ಕಾಲ ಮಳಿಗೆಗಳು ಹೊತ್ತಿ ಉರಿದಿದ್ದು, ಅಪಾರ ನಷ್ಟ ಉಂಟಾಗಿದೆ.

ನಂತರ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎ.ಪಿ.ಎಂ.ಸಿ.ಯ ಮಳಿಗೆಗಳಲ್ಲಿ ನಿನ್ನೆ ಲಕ್ಷ್ಮಿ ಪೂಜೆ ಮಾಡಿದ್ದು, ಪೂಜೆಯ ಬಳಿಕ ವ್ಯಾಪಾರಸ್ಥರು ತೆರಳಿದ್ದರು. ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದೆಂದು ಹೇಳಲಾಗಿದೆ. ಈ ಸಂಬಂಧ ಕೆ.ಟಿ.ಜೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin