ದಾವಣಗೆರೆ ಮೇಯರ್ ರಾಜೀನಾಮೆ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ,ಅ.18- ಅಧಿಕಾರ ಹಂಚಿಕೆ ಒಡಂಬಡಿಕೆ ಹಿನ್ನೆಲೆಯಲ್ಲಿ ಮೇಯರ್ ಅಶ್ವಿನಿ ಪ್ರಶಾಂತ್ ರಾಜೀನಾಮೆ ನೀಡಿದ್ದಾರೆ. ಮೊದಲೇ ನಿರ್ಧರಿಸಿದಂತೆ ಹಿರಿಯ ನಾಯಕರ ಅಣತಿಯ ಮೇರೆಗೆ ಅಶ್ವಿನಿಯವರು ಪದತ್ಯಾಗ ಮಾಡಿದ್ದು ಈಗ ಹೊಸ ಮೇಯರ್ ಯಾರಾಗಬೇಕು ಎಂಬುದರ ಬಗ್ಗೆ ಚರ್ಚೆ ಆರಂಭಗೊಂಡಿದೆ.ಪಾಲಿಕೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್, ಕಳೆದ ಬಾರಿ ಅಶ್ವಿನಿ ಅವರಿಗೆ ಅವಕಾಶ ನೀಡಿತ್ತು. ಈಗ ಅವರ 6 ತಿಂಗಳ ಒಡಂಬಡಿಕೆ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆದೇಶದಂತೆ ರಾಜಿನಾಮೆ ಸಲ್ಲಿಸಿದ್ದಾರೆ.

ಸದ್ಯ ಕಾಂಗ್ರೆಸ್‍ನಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ ಪ್ರಸ್ತುತ ಉಪಮೇಯರ್ ಆಗಿರುವ ರಾಜಶೇಖರ್ ಮೇಯರ್ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಜತೆಗೆ ಇನ್ನೂ ಹಲವರು ತಮ್ಮ ನಾಯಕರ ಮೂಲಕ ಲಾಭಿ ನಡೆಸಿ ಅಧಿಕಾರ ಗದ್ದುಗೆಗೆರುವ ಪ್ರಯತ್ನ ನಡೆಸಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin