ದಿಗ್ವಿಜಯ್ ಸಿಂಗ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಡಿ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Eshwarapa

ಬೆಂಗಳೂರು, ಆ.18- ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗಂಭೀರವಾಗಿ ಪರಿಗಣಿಸದೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿರುವುದಕ್ಕೆ ಟ್ವೀಟರ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಇದು ದೇಶದ್ರೋಹದಂತಹ ಗಂಭೀರ ಪ್ರಕರಣವಲ್ಲ ಎಂದು ಹೇಳಿರುವುದಲ್ಲದೆ ಸುಮ್ಮನೆ ಘೋಷಣೆ ಕೂಗುವುದನ್ನು ರಾಜದ್ರೋಹದ ಆರೋಪದಡಿ ಕೇಸ್ ಹಾಕುವುದು ಯೋಗ್ಯವಾದುದಲ್ಲ ಎಂದು ತಿಳಿಸಿರುವುದು ಕಾಂಗ್ರೆಸ್ನ ದ್ವಂದ್ವ ಹೇಳಿಕೆಯನ್ನು ತೋರಿಸುತ್ತಿದೆ. ಮೊದಲಿನಿಂದಲೂ ಇದೇ ಧೋರಣೆ ಅನುಸರಿಸುತ್ತಿರುವುದರಿಂದ ಕಾಂಗ್ರೆಸಿಗರು ಇನ್ನು ಮುಂದಾದರೂ ಬುದ್ಧಿ ಕಲಿಯಬೇಕು. ಇಲ್ಲದಿದ್ದರೆ ಕರ್ನಾಟಕದಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಎಚ್ಚರಿಸಿದರು.
ಭಾರತೀಯ ಸೇನೆ ವಿರುದ್ಧ ಧಿಕ್ಕಾರ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ದಿಕ್ಕು ತಪ್ಪಿಸಲಾಗುತ್ತಿದೆ. ರಾಷ್ಟ್ರದ್ರೋಹಿಗಳಿಗೆ ರಕ್ಷಣೆ, ದೇಶಭಕ್ತರಿಗೆ ಶಿಕ್ಷೆ ನೀಡುವುದು ಸರಿಯಲ್ಲ. ಘಟನೆ ಖಂಡಿಸಿ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿಗಳು ಹಾಗೂ ಮಹಿಳೆಯರನ್ನು ಲೆಕ್ಕಿಸದೆ ಲಾಠಿಚಾರ್ಜ್ ನಡೆಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin