ದುಬೈನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ : ಕೆ.ಎಸ್.ನಿಸಾರ್ ಅಹಮದ್ಗೆ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

 

dubai

ದುಬೈ, ನ.14-ದೂರದ ದುಬೈನಲ್ಲಿ ಆಚರಿಸಿದ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ದುಬೈನ ಕನ್ನಡ ಸಂಘದಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮದಲ್ಲಿ ನಿಸಾರ್ ಅಹಮದ್ ಅವರನ್ನು ಪೂರ್ಣಕುಂಭ ಸ್ವಾಗತ ನೀಡಿ ಮೆರವಣಿಗೆಯಲ್ಲಿ ಕರೆ ತರಲಾಯಿತು.61ನೆ ಕನ್ನಡ ರಾಜ್ಯೋತ್ಸವದಲ್ಲಿ ನಿಸಾರ್ ಅಹಮದ್ ಅವರಿಗೆ ಕನ್ನಡ ರತ್ನಪ್ರಶಸ್ತಿ ನೀಡಿ ಗೌರವಿಸಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕವಿ ನಿಸಾರ್ ಅಹಮದ್, ಕನ್ನಡ ತಾಯಿ ಕೃಪೆಯಿಂದ ನಾವೆಲ್ಲ ಇಲ್ಲಿದ್ದೇವೆ. ಅವಳ ಸೇವೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ದುಬೈ ಕನ್ನಡಿಗರ ಅಭಿಮಾನದಿಂದ ಎದೆ ತುಂಬಿ ಬಂದಿದೆ ಎಂದರು.ಕನ್ನಡ ಸಂಘದ ಅಧ್ಯಕ್ಷರಾದ ಉಮಾದೇವಿ ವಿದ್ಯಾಧರ್ ಮಾತನಾಡಿ, ದುಬೈನಲ್ಲಿದ್ದುಕೊಂಡು ಕನ್ನಡ ಕಟ್ಟುವುದು ಕಷ್ಟದ ಕೆಲಸ. ಆದರೂ ಎಲ್ಲರೂ ಸೇರಿಕೊಂಡು ಕನ್ನಡ ಉಳಿಸಿ, ಬೆಳೆಸುವ ಕೆಲಸವನ್ನು ಮಾಡುತ್ತಿದ್ದೇವೆ. ಕರ್ನಾಟಕ ಸರ್ಕಾರ ರಾಜ್ಯದಿಂದ ಕಲಾವಿದರನ್ನು ಕಳುಹಿಸಿಕೊಡಲು ಸಹಕಾರ ನೀಡಿದರೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಹೇಳಿದರು.ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಸದನ್ ದಾಸ್ ಮಾತನಾಡಿ, ದುಬೈನಲ್ಲಿ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುತ್ತೇವೆ. ಅರಬ್ಬರ ನಾಡಿನಲ್ಲಿ ಕನ್ನಡ ಕಟ್ಟುವ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ಕನ್ನಡ ಮನಸ್ಸುಗಳು ಒಂದಾಗಿ ನಿಸ್ವಾರ್ಥ ಸೇವೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin