ದುಷ್ಕರ್ಮಿಗಳಿಂದ ಕಬ್ಬಿನ ಗದ್ದೆಗೆ ಬೆಂಕಿ ಅಪಾರ ಹಾನಿ : ಪರಿಹಾರಕ್ಕೆ ಹೆಚ್‍ಡಿಕೆ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

KUMARASWAMI

ಮಂಡ್ಯ,ಆ.26-ಕಟಾವಿಗೆ ಬಂದಿದ್ದ ಕಬ್ಬಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಕಬ್ಬು ನಷ್ಟವಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಹಳ್ಳಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹಾಲಿಂಗ, ಸಿದ್ದೇಗೌಡ ಹಾಗೂ ಲಿಂಗರಾಜು ಎಂಬ ಮೂವರು ರೈತರ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪರಿಹಾರಕ್ಕೆ ಎಚ್‍ಡಿಕೆ ಒತ್ತಾಯ: ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳು ಪತ್ತೆಹಚ್ಚಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಜಿಲ್ಲೆಯ ಕೆಆರ್‍ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಿನ್ನೆ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ನಡೆಸಿದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಅಲೆಮನೆಗೆ ಕಬ್ಬು ಕೊಡುತ್ತಾರೆ ಎಂದು ಕಾರ್ಖಾನೆಯವರೇ ಕಬ್ಬಿಗೆ ಬೆಂಕಿ ಹೆಚ್ಚಿದ್ದಾರೆ ಎಂಬ ವಿಷಯವನ್ನು ರೈತರು ನನ್ನ ಗಮನಕ್ಕೆ ತಂದಿದ್ದಾರೆ. ಇದರ ಬಗ್ಗೆ ತನಿಖೆಯಾಗಬೇಕಿದೆ ಎಂದರು.
ಲಕ್ಷಾಂತರ ರೂ. ಮೌಲ್ಯದ ನಷ್ಟ ಅನುಭವಿಸಿರುವ ರೈತರಿಗೆ ಜಿಲ್ಲಾಡಳಿತದಿಂದ ಪರಿಹಾರ ಕೊಡಬೇಕು, ಇಲ್ಲವಾದರೆ ವೈಯಕ್ತಿಕವಾಗಿ ನಾನೇ ಪರಿಹಾರ ಕೊಡುತ್ತೇನೆ ಎಂದು ಎಚ್‍ಡಿಕೆ ಹೇಳಿದರು.

 

► Follow us on –  Facebook / Twitter  / Google+

Facebook Comments

Sri Raghav

Admin