ದೂರವಾಣಿ ಮೂಲಕ ಸಚಿವ ಆಂಜನೇಯಗೆ ಸಿಎಂ ಕ್ಲಾಸ್
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು, ಸೆ.29- ವಿಧಾನ ಸೌಧದಲ್ಲಿ ಆಯುಧ ಪೂಜೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಆಂಜನೇಯಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಆಯುಧ ಪೂಜೆ ಬಗ್ಗೆ ಆಂಜನೇಯ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದರು. ಇಂದು ಬೆಳಗ್ಗೆ ದೂರವಾಣಿಯಲ್ಲಿ ಆಂಜನೇಯ ಅವರನ್ನು ಸಂಪರ್ಕಿಸಿ, ನಿಮಗೆ ಇಷ್ಟವಿಲ್ಲ ಎಂದಾದರೆ ಪೂಜೆ ಮಾಡಬೇಡಿ, ಆದರೆ ಇನ್ನೊಬ್ಬರ ಭಾವನೆಗಳ ವಿಷಯದಲ್ಲಿ ವಿವಾದ ಸೃಷ್ಟಿಸಬೇಡಿ.
ಇಂತಹ ಸೂಕ್ಷ್ಮ ವಿಚಾರಗಳನ್ನು ಮಾತನಾಡುವಾಗ ಎಚ್ಚರವಿರಲಿ. ಚುನಾವಣಾ ವರ್ಷವಾಗಿರುವುದರಿಂದ ಪ್ರತಿ ಹೇಳಿಕೆ, ನಡವಳಿಕೆಗಳು ಸಾರ್ವಜನಿಕವಾಗಿ ಹೆಚ್ಚು ಪರಿಣಾಮ ಬೀರುತ್ತವೆ. ಹಾಗಾಗಿ ಎಚ್ಚರಿಕೆಯಿಂದ ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.
Facebook Comments