ದೂರು ನೀಡಿದರೆ ಭ್ರಷ್ಟ ಅಧಿಕಾರಿಗಳ ವಿರುದ್ದ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

kr--pete--dysp

ಕೆ.ಆರ್.ಪೇಟೆ,ಆ.18- ಸಾರ್ವಜನಿಕರು ಏನೇ ತೊಂದರೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಸೂಕ್ತ ಆಧಾರಗಳೊಂದಿಗೆ ದೂರು ನೀಡಿದರೆ ಭ್ರಷ್ಟಾಚಾರ ನಿರತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಡಿವೈಎಸ್‍ಪಿ ಹೆಚ್.ಎಂ.ಶೈಲೇಂದ್ರಕುಮಾರ್ ಸಲಹೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಭ್ರಷ್ಟಾಚಾರ ಮುಕ್ತರಾಗಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಶಿಕ್ಷೆ ಎದುರಿಸಲು ಸಿದ್ಧರಿರಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿ ತಿಂಗಳೂ ನಿಗಧಿತ ದಿನಾಂಕದಂದು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಸಭೆ ನಡೆಸಲಾಗುತ್ತದೆ. ಯಾವುದೇ ಅಧಿಕಾರಿ ಲಂಚದ ಹಣಕ್ಕೆ ಒತ್ತಾಯಿಸಿದರೆ, ತಮ್ಮ ದೈನಂದಿನ ಕೆಲಸ-ಕಾರ್ಯಗಳಿಗೆ ತೊಂದರೆ ನೀಡಿದರೆ ಸಾರ್ವಜನಿಕರು ದಯಮಾಡಿ ದೂರು ನೀಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರವು ಮುಗಿಲು ಮುಟ್ಟಿದೆ, ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಕೇಂದ್ರ ಸ್ಥಾನಲ್ಲಿರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಆದೇಶ ನೀಡಿದ್ದರೂ ಪಟ್ಟಣದಲ್ಲಿಯೇ ಬೀಡು ಬಿಟ್ಟಿರುವ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಭ್ರಷ್ಟಾಚಾರ ತಡೆಗಟ್ಟಬೇಕೆಂದು ತಾಲೂಕು ಕರವೇ ಅಧ್ಯಕ್ಷ ಹೊನ್ನೇನಹಳ್ಳಿ ವೇಣು, ಕಾರ್ಯದರ್ಶಿ ಸಮೀರ್, ತಾಲೂಕು ಸಂಘಟನಾ ಸಂಚಾಲಕ ಎ.ಎಸ್.ಶ್ರೀನಿವಾಸ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಮಾಕವಳ್ಳಿ ಕುಮಾರಸ್ವಾಮಿ ಅವರು ಎಸಿಬಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ತಾಲೂಕಿನಲ್ಲಿ ಅಕ್ರಮ ಒತ್ತುವರಿ ನಡೆಯುತ್ತಿದೆ. ಮರಳು ಲೂಟಿಯಾಗುತ್ತಿದೆ ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ ಈ ಬಗ್ಗೆ ಕಠಿಣ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದರು. ತಹಶೀಲ್ದಾರ್ ಕೆ.ರತ್ನಾ, ಪುರಸಭೆ ಮುಖ್ಯಾಧಿಕಾರಿ ಯಶವಂತಕುಮಾರ್ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin