ದೆಹಲಿಗೆ ಮರಳಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

Prabamb

ಬೆಂಗಳೂರು, ಆ.28-ಎರಡು ದಿನಗಳ ಅಧಿಕೃತ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ನವದೆಹಲಿಗೆ ಮರಳಿದರು.   ನಿನ್ನೆ ಇಸ್ಕಾನ್ನ ಅಕ್ಷಯ ಪಾತ್ರಾ ಫೌಂಡೇಷನ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ನ್ಯಾಷನಲ್ ಲಾ ಸ್ಕೂಲ್ ಆಫ್ ಯೂನಿರ್ವಸಿಟಿಯ 24ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಘಟಿಕೋತ್ಸವದ ಕಾರ್ಯಕ್ರಮದ ನಂತರ ರಾಷ್ಟ್ರಪತಿಗಳು ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು. [  ಜನರ ಹಕ್ಕು ರಕ್ಷಣೆಗಾಗಿ ಸೈನಿಕರಂತೆ ಸಜ್ಜಾಗಿ : ಭವಿಷ್ಯದ ವಕೀಲರಿಗೆ ಪ್ರಣಬ್ ಕರೆ ] ರಾಜ್ಯಪಾಲ ವಜುಭಾಯಿ ರೂಢಬಾಯ್ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಯರ್ ಮಂಜುನಾಥ್ ರೆಡ್ಡಿ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹಾಜರಿದ್ದು , ಗೌರವ ಪೂರ್ವಕವಾಗಿ ಬೀಳ್ಕೋಟ್ಟರು.

► Follow us on –  Facebook / Twitter  / Google+

Facebook Comments

Sri Raghav

Admin