ದೆಹಲಿಯಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಪೊಲೀಸ್ ಅಧಿಕಾರಿ ಸೇರಿ ಮೂವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Delhi-Firing--01

ನವದೆಹಲಿ ,ಮೇ.1-ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸೇರಿ ಮೂವರು ಮೃತಪಟ್ಟು ಓರ್ವ ಪೇದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಿಯಾನ್‍ವಾಲಿ ಪ್ರದೇಶದಲ್ಲಿ ನಡೆದಿದೆ.   ರಾತ್ರಿ ಕಾರಿನಲ್ಲಿ ಪೊಲೀಸರ ಜೊತೆಗೆ ಕುಳಿತಿದ್ದ ಭುಪೇಂದ್ರ ಹಾಗೂ ಅರುಣ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡ ಏಕಾಏಕಿ ಗುಂಡಿನ ದಾಳಿ ಮಾಡಿದ ಪರಿಣಾಮ ಸಬ್‍ಇನ್‍ಸ್ಪೆಕ್ಟರ್ ವಿಜಯ ಅವರು ಸ್ಥಳದಲ್ಲೇ ಮೃತಪಟ್ಟರು.   ಆರೋಪಿ ಭುಪೇಂದ್ರ ಹಾಗೂ ಅರುಣ್ ವಿರುದ್ದ ವಿವಿಧ ಠಾಣೆಗಳಲ್ಲಿ ಕಳ್ಳತನ, ಅಪರಾಧ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.



ಆರೋಪಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿ ಕಾರಿನಲ್ಲಿ ಕುಳಿತಿದ್ದಾರೆ. ಈ ವೇಳೆ ದುಷ್ಕರ್ಮಿಗಳ ತಂಡ ಗುಂಡಿನ ದಾಳಿ ಮಾಡಿ ಪರಾರಿಯಾಗಿದೆ. ದಾಳಿಯಲ್ಲಿ ಗಾಯಗೊಂಡಿರುವ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin