ದೆಹಲಿ ಏರ್ಪೋರ್ಟ್ ನಲ್ಲಿ ಕಂಚಿನ ಹುಡುಗಿ ಸಾಕ್ಷಿ ಮಲಿಕ್ ಗೆ ಭರ್ಜರಿ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

Sakshi-mlik

ನವದೆಹಲಿ ಆ.24 : ರಿಯೋ ಒಲಿಂಪಿಕ್ಸ್ ಕುಸ್ತಿ ವಿಭಾಗದಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಭಾರತದ ಪದಕದ ಬರ ನೀಗಿಸಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಬೆಳಗ್ಗೆ 3.50ರ ಸುಮಾರಿಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದು ತಲುಪಿದ ಸಾಕ್ಷಿ ಈ ವೇಳೆ ಮಾತನಾಡಿ ರಿಯೋ ಒಲಿಂಪಿಕ್ಸ್ ನಲ್ಲಿ ದೇಶಕ್ಕಾಗಿ ಪದಕ ಗೆಲ್ಲುವುದು ನನ್ನ ಬಹುದಿನಗಳ ಕನಸಾಗಿತ್ತು. ಅದಕ್ಕಾಗಿ ಕಳೆದ ಹನ್ನೆರಡು ವರ್ಷಗಳಿಂದ ಕಠಿಣ ಪರಿಶ್ರಮ ಪಟ್ಟಿದೆ. ನನ್ನ ತಪಸ್ಸಿಗೆ ಫಲ ದೊರೆತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದು, ಸಮಸ್ತ ಭಾರತೀಯರಿಗೆ ಧನ್ಯವಾದ ಹೇಳಿದ್ದಾರೆ. ಸಾಕ್ಷಿ ತವರೂರಾದ ರೊಹ್ಟಕ್ ಜಿಲ್ಲೆಯ ಮೊಖ್ರಾ ಹಳ್ಳಿಯಲ್ಲಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡು ಸದ್ಯ ಸಾಕ್ಷಿ ದೆಹಲಿಯಿಂದ ರೊಹ್ಟಕ್ ಗೆ ತೆರಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಾಕ್ಷಿ ಮಲಿಕ್, ತಮ್ಮ ಸಾಧನೆಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೇ, 2020 ರಲ್ಲಿ ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಹರಿಯಾಣದ ರೋಹ್ಟಕ್ ಜಿಲ್ಲೆಯ ಮೊಖ್ರಾ ಗ್ರಾಮದಲ್ಲಿ ಸಾಕ್ಷಿ ಮಲಿಕ್ ಅವರಿಗೆ ಅದ್ಧೂರಿ ಸಮಾರಂಭದಲ್ಲಿ ಸನ್ಮಾನಿಸಲಾಗುವುದು.

► Follow us on –  Facebook / Twitter  / Google+

Facebook Comments

Sri Raghav

Admin