ದೆಹಲಿ ಬಿಜೆಪಿ ಅಧ್ಯಕ್ಷರಾಗಿ ಮನೋಜ್ ತಿವಾರಿ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

Manoj-Tiwari-n01

ನವದೆಹಲಿ, ನ.30-ರಾಜಧಾನಿ ನವದೆಹಲಿ ಮತ್ತು ಬಿಹಾರ ಬಿಜೆಪಿ ಘಟಕಗಳ ಅಧ್ಯಕ್ಷರುಗಳನ್ನಾಗಿ ಸಂಸದರಾದ ಮನೋಜ್ ತಿವಾರಿ ಮತ್ತು ನಿತ್ಯಾನಂದ ರಾಯ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ದೆಹಲಿ ಮತ್ತು ಬಿಹಾರ ಬಿಜೆಪಿ ಘಟಕಗಳಿಗೆ ಸತೀಶ್ ಉಪಾಧ್ಯಾಯ ಮತ್ತು ಮಂಗಲ್ ಪಾಂಡೆ ಅಧ್ಯಕ್ಷರಾಗಿದ್ದರು. ಈಗ ಅವರ ಸ್ಥಾನಕ್ಕೆ ತಿವಾರಿ ಮತ್ತು ರಾಯ್ ಅವರುಗಳನ್ನು ಕ್ರಮವಾಗಿ ನೇಮಕ ಮಾಡಲಾಗಿದೆ.

ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ದೆಹಲಿ ಮತ್ತು ಬಿಹಾರದಲ್ಲಿ ಪಕ್ಷವನ್ನು ಸಂಘಟಿಸಿ ಬಲಗೊಳಿಸುವ ಉದ್ದೇಶದೊಂದಿಗೆ ಅಮಿತ್ ಷಾ ಈ ಕ್ರಮ ಕೈಗೊಂಡಿದ್ದಾರೆ. ವಿಶೇಷವಾಗಿ ಬಿಹಾರದಲ್ಲಿ ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‍ರ ಪ್ರಾಬಲ್ಯವನ್ನು ಕುಗ್ಗಿಸಲು ಮತ್ತು ಹಿಂದುಳಿದ ವರ್ಗದವರನ್ನು ಪಕ್ಷದತ್ತ ಸೆಳೆಯಲು ಅದೇ ಯಾದವ್ ಸಮುದಾಯದ ರಾಯ್ ಅವರನ್ನು ನೇಮಕ ಮಾಡಲಾಗಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin