ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‍ಗೆ ಸಿಬಿಐ ಶಾಕ್..!

ಈ ಸುದ್ದಿಯನ್ನು ಶೇರ್ ಮಾಡಿ

Arvind-Kejriwal--01

ನವದೆಹಲಿ, ಮೇ.4- ಹತ್ತು ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಇಂದು ಬೆಳಗ್ಗೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಅವರ ಸಚಿವಾಲಯ, ಆರೋಗ್ಯ ಸಚಿವಾಲಯ ಸೇರಿದಂತೆ 6 ಕಡೆಗಳಲ್ಲಿ ದಾಳಿ ನಡೆಸಿದೆ.   ಸಿಬಿಐ ದಾಳಿಯೊಂದಿಗೆ ಕೇಜ್ರಿವಾಲ್‍ಗೆ ಮತ್ತೊಮ್ಮೆ ಭಾರೀ ಮುಖಭಂಗವಾಗಿದೆ. ವಿವಾದಗಳ ಸರಮಾಲೆ ಮತ್ತು ದೆಹಲಿ   ಮಹಾನಗರ ಪಾಲಿಕೆ ಚುನಾವಣೆ ಯಲ್ಲಿ ಹೀನಾಯ ಸೋಲು ಅನುಭವಿಸಿದ್ದ ಅವರಿಗೆ ಸಿಬಿಐ ದಾಳಿ ಮತ್ತೊಂದು ಶಾಕ್ ನೀಡಿದೆ.ಈ ಸಂದರ್ಭದಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲೆ ಪತ್ರಗಳನ್ನು ಪರಿಶೀಲಿಸಿದೆ. ಸಚಿವಾಲಯ ಮತ್ತು ಆರೋಗ್ಯ ಸಚಿವಾಲಯದ ಉನ್ನತಾಧಿಕಾರಿಗಳನ್ನು ವಿಚಾರಣೆಗೊಳಪಡಿಸಿ ಮಾಹಿತಿಯನ್ನು ಕಲೆ ಹಾಕಿದೆ.   ಆರೋಗ್ಯ ಸಚಿವಾಲಯದ ಮಾಜಿ ಕಾರ್ಯದರ್ಶಿ ಹಾಗೂ ಇತರ ಸಿಬ್ಬಂದಿಯನ್ನು ಸಹ ವಿಚಾರಣೆಗೊಳಪಡಿಸಿದ್ದು ,10 ಕೋಟಿ ರೂ. ವಂಚನೆ ಪ್ರಕರಣದ ಬಗ್ಗೆ ವಿವರಗಳನ್ನು ಸಂಗ್ರಹಿಸಿದೆ.   ಇತ್ತೀಚೆಗಷ್ಟೇ ಸಿಬಿಐ ಅಧಿಕಾರಿಗಳು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin