ದೇವನಹಳ್ಳಿ ದಲಿತರ ಪ್ರಾತಿನಿತ್ಯಕ್ಕೆ ಸಮಿತಿ ರಚನೆ

ಈ ಸುದ್ದಿಯನ್ನು ಶೇರ್ ಮಾಡಿ

devanahalli

ದೇವನಹಳ್ಳಿ, ಆ.9- ಮೀಸಲು ಕ್ಷೇತ್ರವನ್ನಾಗಿ ಪರಿವರ್ತಿಸುವ ಕುರಿತಂತೆ ದೇವನಹಳ್ಳಿ ಮಾಜಿ ಪುರಸಭೆ ಸದಸ್ಯ ಎಂ.ನಾರಾಯಣಸ್ವಾಮಿ ಅವರ ನಿವಾಸದಲ್ಲಿ ದಲಿತ ಸಮುದಾಯ ಮುಖಂಡರ ಗಂಭೀರ ಚರ್ಚೆ ನಡೆಯಿತು.  ದೇವನಹಳ್ಳಿ ಕ್ಷೇತ್ರದಲ್ಲಿ ದಲಿತರಿಗೆ ಪ್ರಾತಿನಿತ್ಯ ದೊರೆಯುವಂತಾಗಲು ಇದೇ 10ರಂದು ಸಭೆ ಸೇರಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಮಾಡಲು ಕೂಡ ತೀರ್ಮಾನಿಸಲಾಗಿದೆ. ಇದರ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದಲಿತ ಮುಖಂಡ ಜಿ.ಮಾರಪ್ಪ, ತಾಲ್ಲೂಕಿನಲ್ಲಿ 60 ಸಾವಿರಕ್ಕೂ ಹೆಚ್ಚು ಮಾದಿಗ ಸಮುದಾಯದವರು ನೆಲೆಸಿದ್ದಾರೆ. ಎಲ್ಲರನ್ನೂ ಒಗ್ಗೂಡಿಸಿ ಪಕ್ಷಭೇದ ಮರೆತು ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನಗಳು ನಡೆಯಬೇಕಾಗಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ವಿ. ನಾರಾಯಣಸ್ವಾಮಿ ಮಾತನಾಡಿ, ಸಮುದಾಯ ಒಂದೇ ಮಠ ಒಂದೇ ಟ್ರಸ್ಟ್ ಹೊಂದಿರಬೇಕು. ಶಿಕ್ಷಣದಲ್ಲಿ ಸಮುದಾಯ ಅಭಿವೃದ್ಧಿ ಹೊಂದಲು ಅದರ ಮಹತ್ವದ ಬಗ್ಗೆ ಜಾಗೃತಿ ಅಭಿಯಾನ ಆಗಬೇಕು. ಎಂದು ಸಲಹೆ ನೀಡಿದರು. ಮಾಜಿ ಪುರಸಭಾಧ್ಯಕ್ಷ ಎಂ. ನಾರಾಯಣಸ್ವಾಮಿ ಮಾತನಾಡಿ, ತಾಲೂಕಿನಲ್ಲಿ 60 ಸಾವಿರ ಜನಸಂಖ್ಯೆ ಹೊಂದಿದ್ದು, ರಾಜಕೀಯ ಪ್ರಾತಿನಿಧ್ಯಗಳಿಗೆ ಹೋರಾಟದ ಅಗತ್ಯವಿದೆ. ಶಿಕ್ಷಣ ಸಂಸ್ಥೆಗಳನ್ನು ಮಾಡುವುದರ ಮೂಲಕ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ಸಿಗುವಂತಾಗುತ್ತದೆ. ನಿಸ್ವಾರ್ಥ ಸೇವೆಯಾಗಬೇಕು, ಪರಸ್ಪರ ನಂಬಿಕೆ ವಿಶ್ವಾಸಗಳಿಸಬೇಕು, ಯುವಕರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡುವುದರ ಮೂಲಕ ಅವರನ್ನು ಗುರ್ತಿಸುವಂತಾಗಬೇಕು ಎಂದು ಕಿವಿಮಾತು ಹೇಳಿದರು.
ತಾಪಂ ಮಾಜಿ ಸದಸ್ಯ ಚಂದೇನಹಳ್ಳಿ ಮುನಿಯಪ್ಪ, ಮುಖಂಡ ಎಸ್.ಗುರಪ್ಪ, ಡಿ.ಎನ್. ನಾರಾಯಣಸ್ವಾಮಿ, ಜಾಲಿಗೆ ಮುನಿರಾಜು, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ, ಮಾದಿಗ ದಂಡೋರ ರಾಜ್ಯ ಉಪಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ, ತಾಲೂಕು ಜೆಡಿಎಸ್ ಎಸ್‍ಸಿ ಘಟಕದ ಅಧ್ಯಕ್ಷ ಈರಪ್ಪ, ತಾಪಂ ಸದಸ್ಯ ಗೋಪಾಲಸ್ವಾಮಿ, ಪುರಸಭಾ ಸದಸ್ಯ ನರಸಿಂಹಮೂರ್ತಿ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin