ದೇವೇಗೌಡರು ಮತ್ತು ಕುಮಾರಸ್ವಾಮಿ ಅವರಿಗೆ ರಾಜ್ಯದಲ್ಲಿ ಬದಲಾವಣೆ ತರುವ ಹಂಬಲವಿದೆ : ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

gopalaiah

ಬೆಂಗಳೂರು, ಏ.23- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರಾಜ್ಯದಲ್ಲಿ ಬದಲಾವಣೆ ತರುವ ಹಂಬಲವಿದೆ ಆದ್ದರಿಂದ ಜೆಡಿಎಸ್ ಅಧಿಕಾರಕ್ಕೆ ತರಬೇಕೆಂದು ಮಹಾಲಕ್ಷ್ಮೀ ಲೇಔಟ್‍ನ ಪಕ್ಷದ ಅಭ್ಯರ್ಥಿ ಕೆ.ಗೋಪಾಲಯ್ಯ ಮತದಾರರಲ್ಲಿ ಮನವಿ ಮಾಡಿದ್ದಾರೆ. ತಮ್ಮ ಬೆಂಬಲಿಗರು, ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಕ್ಷೇತ್ರ ದ ನಾಗಪುರ ವಾರ್ಡ್‍ನಲ್ಲಿ ಕೆ.ಗೋಪಾಲಯ್ಯ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜನಪರವಿರುವ ಪಕ್ಷ ವಾಗಿದ್ದು , ಎಲ್ಲರನ್ನೂ ಸಮಭಾವನೆಯಿಂದ ಕಾಣಲಾಗುತ್ತದೆ, ರಾಜ್ಯದ ಅಭಿವೃದ್ಧಿಗೆ ಸದಾ ಮಿಡಿಯುವ ಪಕ್ಷವಾಗಿದೆ ಎಂದರು.

ಈ ಹಿಂದೆ ನಡೆದ ಚುನಾವಣೆಯಲ್ಲಿ ಜನರು ನನ್ನ ಮೇಲೆ ನಂಬಿಕೆಯಿಟ್ಟು ಮತ ನೀಡಿ ನನ್ನನ್ನು ಜಯಶೀಲರನ್ನಾಗಿ ಮಾಡಿದ್ದರು, ನೀವು ನನ್ನ ಮೇಲಿಟ್ಟಿದ್ದ ಭರವಸೆಯಂತೆ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಉದ್ಯಾನವನ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಿದ್ದೇನೆ.  ಕ್ಷೇತ್ರದಲ್ಲಿ ಮತ್ತಷ್ಟು ಉತ್ತಮ ಕಾರ್ಯಗಳನ್ನು ಮಾಡುವ ಉದ್ದೇಶದಿಂದ ಈ ಬಾರಿಯೂ ಸ್ಪರ್ಧಿಸಿದ್ದು, ಮತದಾರರು ಆಶೀರ್ವಾದಿಸಿ ಮತ್ತೆ ಚುನಾಯಿಸಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ಗೋಪಾಲಯ್ಯಗೆ ಪಾಲಿಕೆ ಸದಸ್ಯ ಭದ್ರೇಗೌಡ, ಜೆಡಿಎಸ್ ಮುಖಂಡರಾದ ವೆಂಕಟೇಶಮೂರ್ತಿ, ಕೆಂಪತಿ ನಾಗರಾಜು, ರೇಣುಕಾರಾಧ್ಯಾ,ರವಿ ಮತ್ತಿತರರು ಜೊತೆಗಿದ್ದರು.

Facebook Comments

Sri Raghav

Admin