ದೇವೇಗೌಡರ ಮನೆಗೆ ಕಾಂಗ್ರೆಸ್ ನಾಯಕರ ದೌಡು : ಬಿಬಿಎಂಪಿ ಮೈತ್ರಿ ಮುಂದುವರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

BBMP-Mayou

ಬೆಂಗಳೂರು, ಆ.23- ಬಿಬಿಎಂಪಿ ಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಕೆ ಬಗ್ಗೆ ಮೇಯರ್ ಮಂಜುನಾಥರೆಡ್ಡಿ, ಬಿಬಿಎಂಪಿ ಸದಸ್ಯರಾದ ಜಿ.ಪದ್ಮಾವತಿ ಸೇರಿದಂತೆ ಹಲವು ಮುಖಂಡರು ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು.  ಸುಮಾರು 40ಕ್ಕೂ ಹೆಚ್ಚು ನಿಮಿಷಗಳ ಕಾಲ ಮಾತುಕತೆ ನಡೆಸಿದ ಅವರು, ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಈ ಬಾರಿಯೂ ಮುಂದುವರಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸಾಧಕ-ಬಾಧಕಗಳು, ಅಧಿಕಾರ ಹಂಚಿಕೆ, ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ರಾಜಕಾರಣದ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿರುವುದು ತಿಳಿದುಬಂದಿದೆ.

ಚರ್ಚೆ ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರೊಂದಿಗೆ ಮೈತ್ರಿ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಕಾಂಗ್ರೆಸ್ನವರು ದೇವೇಗೌಡರ ಮನೆಗೆ ಬಂದು ಮಾತುಕತೆ ನಡೆಸಿ ದ್ದಾರೆ. ನಾವು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಯವರೊಂದಿಗೆ ಚರ್ಚೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin