ದೇಶದಲ್ಲಿ ಮೋದಿ ಹವಾ ಠುಸ್ ಆಗಿದೆ : ನಟಿ ಖುಷ್ಬೂ ಲೇವಡಿ

ಈ ಸುದ್ದಿಯನ್ನು ಶೇರ್ ಮಾಡಿ

Khushbu--01

ಚಿಕ್ಕಬಳ್ಳಾಪುರ, ಮಾ.25- ಅಧಿಕಾರಕ್ಕೆ ಬರುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಗಳು ಭರವಸೆಯಾಗಿಯೇ ಉಳಿದಿದ್ದು, ಮೋದಿ ಹವಾ ದೇಶದಲ್ಲಿ ಕುಸಿದಿದೆ ಎಂದು ಬಹುಭಾಷಾ ನಟಿ ಹಾಗೂ ಕಾಂಗ್ರೆಸ್ ವಕ್ತಾರೆ ಖುಷ್ಬೂ ಲೇವಡಿ ಮಾಡಿದ್ದಾರೆ. ಶಾಸಕ ಸುಧಾಕರ್ ಒಡೆತನದ ಶ್ರೀ ಸಾಯಿಕೃಷ್ಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ಥಾಪಿಸಲಾದ ಶುದ್ದಕುಡಿಯುವ ನೀರಿನ ಘಟಕ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಬಾರಿಯೂ ಕಾಂಗ್ರೆಸ್ ಪರವಾದ ಶಾಸಕರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಬೇಕು ಎಂದರು.

ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಹೇರಳವಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಅವರ ಜನಪರ ಕಾರ್ಯಗಳೇ ಎಂಬುದರಲ್ಲಿ ಎರಡು ಮಾತಿಲ. ಮತಬಾಂಧವರು ಅತ್ಯಂತ ಹೆಚ್ಚು ಮತಗಳನ್ನು ಶಾಸಕ ಸುಧಕರ್ ಅವರಿಗೆ ನೀಡಿ ಅವರನ್ನು ಜಯಗಳಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಶಾಸಕ ಡಾ.ಕೆ.ಸುಧಕರ್ ಮಾತನಾಡಿ, ಜನ ಸೇವೆ ಮಾಡುವ ಮೂಲಕ ಜನಾನುರಾಗಿಯಾಗಬೇಕು ಎಂದು ಬಯಸಿ ಶೈಕ್ಷಣಿಕ ಆರೋಗ್ಯ ಕ್ಷೇತ್ರದಲ್ಲೂ ಸಾಕಷ್ಟು ಸೇವೆ ಮಾಡುತ್ತಾ ಬಂದಿದ್ದೇನೆ. ಇದಕ್ಕೆಲ್ಲಾ ಮತಬಾಂಧವರ ಆಶೀರ್ವಾದವೇ ಕಾರಣ ಎಂದರು.

ನಗರದ ಕಂದವಾರ ಬಾಗಿಲು ಗ್ಯಾರೇಜ್ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಇದೇ ವೇಳೆ ಲೋಕಾರ್ಪಣೆ ಮಾಡಿದರು. ಮಾಜಿ ಶಾಸಕ ಸುಧಾಕರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ನಗರಸಭೆ ಅಧ್ಯಕ್ಷ ಮುನಿಕೃಷ್ಣಪ್ಪ, ಉಪಾಧ್ಯಕ್ಷೆ ಲೀಲಾವತಿಶ್ರೀನಿವಾಸ್, ಸದಸ್ಯರಾದ ಭಾರತಿ, ನಾಗರತ್ನ, ಜಯಮ್ಮ, ಸುಬ್ರಹ್ಮಣ್ಯಾಚಾರಿ, ಮೊಬೈಲ್‍ಬಾಬು, ಅಪ್ಪಾಲುಮಂಜುನಾಥ್ ಸೇರಿದಂತೆ ಮತ್ತಿತರರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin