ದೇಶದಾದ್ಯಂತ 71ನೇ ಸ್ವಾತಂತ್ರ್ಯೋತ್ಸವ ಸಂಭ್ರಮ (Live Updates)

ಈ ಸುದ್ದಿಯನ್ನು ಶೇರ್ ಮಾಡಿ

Modi--01

– Live Updates –

 ದೇಶಾದ್ಯಂತ 71 ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ, ಸಂಭ್ರಮ ಮೇಳೈಸಿದೆ. ಉತ್ತರದಿಂದ ದಕ್ಷಿಣದವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

Modi 02

ಇತ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಲಿದ್ದಾರೆ. ಮೈದಾನದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೆ 51 ಇನ್ಸ್ಪೆಕ್ಟರ್, 92 ಸಬ್ ಇನ್ಸ್ಪೆಕ್ಟರ್, ಮಹಿಳಾ ಪೇದೆಗಳು ಸೇರಿ ಒಟ್ಟು 1002 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. 56 ಕ್ಕೂ ಹೆಚ್ಚು ಸಿಸಿಕ್ಯಾಮೆರಾ ಅಳವಡಿಸಲಾಗಿದೆ. ಮೈದಾನದ ಸುತ್ತ 8 ಸಶಸ್ತ್ರ ತುಕಡಿ ನಿಯೋಜನೆ ಮಾಡಲಾಗಿದೆ. ಅಲ್ದೇ ಗರುಡ ಕಮಾಂಡೋ ಪಡೆ ನಿಯೋಜನೆ ಮಾಡಲಾಗಿದೆ. (More Updates Awaiting..)

Modi 02

ಪ್ರಧಾನಿ ಮೋದಿಗೆ ಕರೆ ಮಾಡಿ ಶುಭ ಕೋರಿದ ಟ್ರಂಪ್ : 

ದೇಶಾದ್ಯಂತ ಇಂದು 71 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇಶದೆಲ್ಲೆಡೆ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸೂಚಿಸಲಾಗಿದೆ. ವಿದೇಶಗಳಲ್ಲೂ ಭಾರತೀಯರು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಭಾರತದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ವಿದೇಶಿ ಗಣ್ಯರು ಶುಭ ಕೋರಿದ್ದಾರೆ.  ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ವಿಚಾರವನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದು, ಡೋನಾಲ್ಡ್ ಟ್ರಂಪ್ ಗೆ ಧನ್ಯವಾದ ಹೇಳಿದ್ದಾರೆ.


Modi-5

Facebook Comments

Sri Raghav

Admin