ದೇಶದ್ರೋಹಿಗಳನ್ನು ಕಾಂಗ್ರೆಸ್ ಬೆಂಬಲಿಸಲ್ಲ : ಮಲ್ಲಿಕಾರ್ಜುನ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

Mallikarju

ಕಲಬುರಗಿ, ಆ.22- ದೇಶ ದ್ರೋಹಿಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂಬ ಆರೋಪ ಮಾಡಿರುವ ಬಿಜೆಪಿ ವಿರುದ್ಧ ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ದೇಶದ್ರೋಹಿಗಳಿಗೆ ರಕ್ಷಣೆ ನೀಡುವುದಿಲ್ಲ. ಬಿಜೆಪಿ ನಿರಾಧಾರವಾದ ಆರೋಪ ಮಾಡುತ್ತಿದೆ. ಸಾಧಕ-ಬಾಧಕಗಳನ್ನು ನೋಡಿ ಆಮ್ನೆಸ್ಟಿ ವಿರುದ್ಧ ಕ್ರಮ ಕೈಗೊಳ್ಳ ಲಾಗುವುದು ಎಂದರು.  ಆಮ್ನೆಸ್ಟಿ ಕ್ಲೀನ್ ಚಿಟ್ ನೀಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಗೃಹ ಸಚಿವಾಲಯ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ವರದಿ ಬಂದ ನಂತರ ಕ್ರಮಕೈಗೊಳ್ಳುವುದಾಗಿ ಈಗಾಗಲೇ ಪರಮೇಶ್ವರ್ ಹೇಳಿದ್ದಾರೆ.

ಹಾಗಿದ್ದೂ ಸಣ್ಣ ಸಣ್ಣ ವಿಷಯಗಳಿಗೆ ರಾಜಕೀಯ ಮಾಡಬಾರದು. ಇದರಿಂದ ಜನರಲ್ಲಿ ಒಡಕು ಮೂಡಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮಂಗಳೂರಿನಲ್ಲಿ ಗೋ ಸಾಗಾಣಿಕೆಯ ವ್ಯಕ್ತಿಯ ಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಒಂದು ಕಡೆ ಗೋ ರಕ್ಷಣೆ ಮಾಡ್ತೀವಿ ಅಂತಾರೆ. ಮತ್ತೊಂದು ಕಡೆ ಅವರೇ ಗೋವುಗಳನ್ನು ಸಾಗಾಣಿಕೆ ಮಾಡುತ್ತಾರೆ. ಇದು ಬಿಜೆಪಿಯ ಇಬ್ಬಗೆಯ ನೀತಿ. ಗೋವಿನ ವಿಷಯದಲ್ಲಿ ಕೇಂದ್ರ ಸರ್ಕಾರ ಡಬಲ್ ಗೇಮ್ ಆಡುತ್ತಿದೆ ಎಂದು ಕಿಡಿಕಾರಿದರು.

► Follow us on –  Facebook / Twitter  / Google+

Facebook Comments

Sri Raghav

Admin