ದೇಶದ ಏಕತೆಗೆ ದಕ್ಕೆ ತರುವ ಸಂಘಟನೆಗಳಿಗೆ ಕಡಿವಾಣ ಹಾಕಬೇಕು : ಎಚ್.ಆಂಜನೇಯ

ಈ ಸುದ್ದಿಯನ್ನು ಶೇರ್ ಮಾಡಿ

Anjaneya--01

ಬೆಂಗಳೂರು, ಜ.5- ಯಾವುದೇ ಸಂಘಟನೆಯಾಗಲಿ ಕೋಮು ಸೌಹಾರ್ದಕ್ಕೆ, ದೇಶದ ಏಕತೆಗೆ ಧಕ್ಕೆ ತರಬಾರದು. ಒಂದು ವೇಳೆ ಅಂತಹ ಕೃತ್ಯ ನಡೆಸುವ ಸಂಘಟನೆಗಳಿಗೆ ಕಡಿವಾಣ ಹಾಕುವುದು ಅಗತ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ತಿಳಿಸಿದರು. ನಗರದಲ್ಲಿಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ನೂತನ ಕಚೇರಿ ಉದ್ಘಾಟನೆ ಮತ್ತು 2018ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆಗಳಿದ್ದರೂ ಪರಸ್ಪರ ಸಾಮರಸ್ಯ ಮೂಡಿಸುವಂತಿರಬೇಕು ಎಂದರು.

ಮಂಗಳೂರಿನಲ್ಲಿ ದೀಪಕ್‍ರಾವ್ ಹತ್ಯೆ ಪ್ರಕರಣವನ್ನು ಖಂಡಿಸುತ್ತೇನೆ ಎಂದ ಅವರು, ಚುನಾವಣೆಗೂ ಈ ರೀತಿಯ ಹತ್ಯೆಗಳಿಗೂ ಯಾವುದೇ ಸಂಬಂಧವಿಲ್ಲ. ಬೇರಾವುದೋ ಕಾರಣಕ್ಕಾಗಿ ಇಂತಹ ಘಟನೆಗಳು ಸಂಭವಿಸುತ್ತವೆ. ಈ ರೀತಿ ನಡೆಯಬಾರದು. ಎಲ್ಲರ ಹಿತ ಬಯಸುವ ಕೆಲಸ ಆಗಬೇಕು ಎಂದು ಹೇಳಿದರು.

ಕ್ಷೇತ್ರ ಬದಲಿಸಲ್ಲ:

ಚಿತ್ರದುರ್ಗ ಜಿಲ್ಲೆಯಲ್ಲಿ ತಮ್ಮ ರಾಜಕೀಯ ಬದುಕಿದ್ದು, ಹೊಳಲ್ಕೆರೆ ಕ್ಷೇತ್ರದಿಂದಲೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸ ಲಿದ್ದೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿ ಬಂದಿರುವ ನನ್ನನ್ನು ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹಾಕಿದ್ದಾರೆ. ಆದರೂ ಹೊಳಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಮರು ಆಯ್ಕೆ ಮಾಡಬೇಕೆಂದು ಜನರಲ್ಲಿ ಮನವಿ ಮಾಡುವುದಾಗಿ ಹೇಳಿದರು.

ವರದಿ ಅಂತಿಮ:

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣಪತಿಯ ಸಮೀಕ್ಷಾ ವರದಿಯು ಅಂತಿಮ ಹಂತ ತಲುಪಿದೆ ಎಂದು ಆಂಜನೇಯ ತಿಳಿಸಿದರು. ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಅಂತಿಮವಾಗಿದೆ. ದೇಶದಲ್ಲೆಲ್ಲೂ ಇಂತಹ ಸಮೀಕ್ಷೆ ನಡೆಸಲಾಗಿಲ್ಲ. ಯಾವ ಸಮುದಾಯಕ್ಕೆ ಅನ್ಯಾಯ ವಾಗಿದೆಯೋ ಆ ವರ್ಗಕ್ಕೆ ನ್ಯಾಯ ಒದಗಿಸುವಲ್ಲಿ ಈ ಸಮೀಕ್ಷೆ ಸಹಕಾರಿಯಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಯೋಗ ದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸಮೀಕ್ಷಾ ವರದಿ ಬಿಡುಗಡೆಗೊಳಿಸುವ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಸಮೀಕ್ಷಾ ವರದಿ ಬಿಡುಗಡೆಯಿಂದ ಕಾಂಗ್ರೆಸ್‍ಗೆ ಯಾವುದೇ ರೀತಿಯ ಹಿನ್ನಡೆಯಾಗುವುದಿಲ್ಲ. ಬದಲಿಗೆ ಮುನ್ನಡೆಯಾಗಲಿದ್ದು, ಹೊಸ ಮುನ್ನುಡಿ ಬರೆಯಲಿದೆ. ಸಮೀಕ್ಷೆಯಿಂದ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲು ಸಹಕಾರಿಯಾಗುತ್ತದೆ ಎಂದು ಅವರು ಹೇಳಿದರು.

Facebook Comments

Sri Raghav

Admin