ದೇಶದ ಜನತೆಗೆ ರಾಷ್ಟ್ರಪತಿ, ಪ್ರಧಾನಿ ಯುಗಾದಿ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Modi-And-Pranab

ನವದೆಹಲಿ, ಮಾ.28-ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಹಬ್ಬವು ನಮ್ಮ ಜನರಲ್ಲಿ ಶಾಂತಿ ಮತ್ತು ನೆಮ್ಮದಿಯ ಜೊತೆಗೆ ಪರಸ್ಪರ ತಾಳ್ಮೆ ಮತ್ತು ಸೌಹಾರ್ದತೆಗೆ ಕಾರಣವಾಗಲಿ. ನಮ್ಮ ದೇಶದ ಜನರು ತಾಯ್ನಾಡಿಗಾಗಿ ಅಮೂಲ್ಯ ಸೇವೆ ಸಲ್ಲಿಸುವಂತಾಗಲಿ ಎಂದು ರಾಷ್ಟ್ರಪತಿ ಹೇಳಿದ್ದಾರೆ.
ದೇಶದ ಜನತೆ ಹೊಸ ವರ್ಷವನ್ನು ಆಚರಿಸುತ್ತಿದ್ದಾರೆ. ನವ ಸಂವತ್ಸರವು ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾಡಿನ ಜನತೆಗೆ ಶುಭ ಕೋರಿರುವ ಮಾಜಿ ಪ್ರಧಾನಿ ದೇವೇಗೌಡರು, ಹೊಸ ವರ್ಷವು ಜನರಿಗೆ ಸು:ಖ-ಸಮೃದ್ಧಿ ನೀಡಲಿ. ಜನರ ಸಂಕಷ್ಟಗಳನ್ನು ನಿವಾರಿಸಲಿ ಎಂದು ಆಶಿಸಿದ್ದಾರೆ.

ಹೊಸ ವರ್ಷದ ಆರಂಭವನ್ನು ದೇಶದ ಅನೇಕ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಚೈತ್ರ ಸುಕ್ಲದಿ, ಯುಗಾದಿ, ಉಗಾದಿ, ಗುಡಿ ಪಡವ, ಚೆಟಿ ಚಾಂದ್, ನವ್‍ರೇ ಮತ್ತು ಸಜಿಬು ಚೀರಾವೋಬಾ ಎಂದು ಆಚರಿಸಲಾಗುತ್ತದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin