ದೇಶದ ವಿವಿಧೆಡೆ ಭಾರೀ ಮಳೆ, ಪ್ರವಾಹ : ಸತ್ತವರ ಸಂಖ್ಯೆ 90ಕ್ಕೇರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Rain--01

ಗುವಾಹತಿ, ಜು.13-ಈಶಾನ್ಯ ರಾಜ್ಯ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಸತ್ತವರ ಸಂಖ್ಯೆ 90ಕ್ಕೇರಿದೆ. ಈಶಾನ್ಯ ರಾಜ್ಯದಲ್ಲಿ ನೈಸರ್ಗಿಕ ವಿಕೋಪದಿಂದ 26 ಜಿಲ್ಲೆಗಳಲ್ಲಿ ಈವರೆಗೆ 60 ಮಂದಿ ಮೃತಪಟ್ಟಿದ್ದು, ಲಕ್ಷಾಂತರ ಮಂದಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ವಿಶ್ವ ವಿಖ್ಯಾತ ಕಾಝಿರಂಗ ರಾಷ್ಟ್ರೀಯ ಉದ್ಯಾನವನ ಜಲವೃತವಾಗಿದ್ದು, ಅನೇಕ ವನ್ಯಜೀವಿಗಳು ಮೃತಪಟ್ಟಿವೆ. ಇವುಗಳ ನಿಖರ ಸಂಖ್ಯೆ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

ಅರುಣಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲೂ ಭಾರೀ ವರ್ಷಧಾರೆ, ನೆರೆ ಹಾವಳಿ ಮತ್ತು ಭೂಕುಸಿತದಿಂದ ಈವರೆಗೆ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ಧಾರೆ. ಗುಜರಾತಿನ ಸೌರಾಷ್ಟ್ರ ಜಿಲ್ಲೆಯ ವಿವಿಧೆಡೆ ಶುಕ್ರವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರಾಜ್‍ಕೋಟ್, ಮೋರ್ಬಿ, ಜಾಮ್‍ನಗರ್ ಮತ್ತು ಸುರೇಂದ್ರ ನಗರಗಳಲ್ಲಿ ಈವರೆಗೆ ನೈಸರ್ಗಿಕ ವಿಕೋಪಕ್ಕೆ ಏಳು ಮಂದಿ ಬಲಿಯಾಗಿದ್ದಾರೆ. ಅಪಾಯದಲ್ಲಿ ಸಿಲುಕಿದ್ದ 2,000ಕ್ಕೂ ಹೆಚ್ಚು ಜನರನ್ನು ರಕ್ಷಣಾ ಕಾರ್ಯಕರ್ತರು ರಕ್ಷಿಸಿದ್ದಾರೆ. ಮಹರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ತಹಶೀಲ್‍ನ ಮರಲ್ ಗ್ರಾಮದಲ್ಲಿ ಭಾರೀ ಮಳೆಯಿಂದ ಮನೆಯೊಂದು ಕುಸಿದು ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin