ದೇಶಾದ್ಯಂತ ಸಂಭ್ರಮದ ರಾಮನವಮಿ, ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Ramanavami--01

ನವದೆಹಲಿ, ಮಾ.25- ಸರ್ವ ಶ್ರೇಷ್ಠ ಮಹಾವ್ಯಕ್ತಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮದಿನದ ಪ್ರಯುಕ್ತ ಇಂದು ದೇಶಾದ್ಯಂತ ಸಡಗರ-ಸಂಭ್ರಮದಿಂದ ರಾಮನವಮಿ ಆಚರಿಸಲಾಯಿತು. ರಾಮನವಮಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಡಾ.ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಶುಭ ಕೋರಿದ್ದಾರೆ.

ಉತ್ತರ ಪ್ರದೇಶದ ಅಯೋಧ್ಯೆ, ಲಕ್ನೋ ಸೇರಿದಂತೆ ರಾಜಧಾನಿ ದೆಹಲಿ, ಮುಂಬೈ, ಕೊಲ್ಕತಾ, ಚೆನ್ನೈ, ಬೆಂಗಳೂರು, ಭುವನೇಶ್ವರ ಮೊದಲಾದ ನಗರಗಳಲ್ಲಿ ರಾಮನವಮಿ ಪ್ರಯುಕ್ತ ಇಂದು ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ವಿವಿಧ ಸಂಘಟನೆಗಳು ವರ್ಣರಂಜಿತ ರ್ಯಾಲಿಗಳನ್ನು ನಡೆದವು. ರಾಮಜನ್ಮ ದಿನದ ಪ್ರಯುಕ್ತ ದೇಶದ ವಿವಿಧ ಭಾಗಗಳಲ್ಲಿ ಸಭೆ, ಸಮಾರಂಭ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಾಮನ ಕಥಾಶ್ರವಣ, ರಾಮಾಯಣ ವಾಚನಗಳು ನಡೆದು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆಯನ್ನು ನಡೆಸಲಾಯಿತು. ಬೆಂಗಳೂರು ಸೇರಿದಂತೆ ದಕ್ಷಿಣ ರಾಜ್ಯದ ನಗರಗಳಲ್ಲಿ ರಾಮನವಮಿ ಅಂಗವಾಗಿ ಸಾರ್ವಜನಿಕರಿಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ ಮತ್ತು ಕೋಸಂಬರಿಗಳನ್ನು ವಿತರಿಸಲಾಯಿತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin