ದೇಶಾದ್ಯಂತ 108 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

NEET-Exam--01

ಬೆಂಗಳೂರು, ಮೇ 7-ರಾಜ್ಯಾದ್ಯಂತ ಇಂದು ವೈದ್ಯಕೀಯ ಶಿಕ್ಷಣದ ನೀಟ್ ಪರೀಕ್ಷೆ ಅಲ್ಲಲ್ಲಿ ಸಣ್ಣಪುಟ್ಟ ಗೊಂದಲಗಳ ನಡುವೆ ಸುಸೂತ್ರವಾಗಿ ನಡೆಯಿತು. ಇಂದು 180 ಅಂಕಗಳಿಗೆ ಜೀವಶಾಸ್ತ್ರ ಪರೀಕ್ಷೆ ನಡೆದಿದೆ.  ಪ್ರವೇಶ ಪತ್ರದ ಜೊತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತರುವಂತೆ ಸೂಚನೆ ನೀಡಲಾಗಿತ್ತು. ಆದರೆ ಕೆಲವೆಡೆ ವಿದ್ಯಾರ್ಥಿಗಳು ಆಧಾರ್ ತರದೇ ಇದ್ದ ಕಾರಣ ಮೇಲ್ವಿಚಾರಕರು ಹಾಗೂ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿರುವುದು ವರದಿಯಾಗಿದೆ.ಸ್ವಲ್ಪ ತಡವಾಗಿ ಬಂದಂತಹ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲೂ ಪ್ರಶ್ನೆ ಪತ್ರಿಕೆ ನೀಡುತ್ತಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಸಂತಸ ಮನೆ ಮಾಡಿತ್ತು. ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ , ಮೈಸೂರು, ಬೆಳಗಾವಿಯ ಪರೀಕ್ಷಾ ಕೇಂದ್ರಗಳು ಸೇರಿದಂತೆ ದೇಶಾದ್ಯಂತ 108 ಮಹಾನಗರಗಳಲ್ಲಿ ಸುಮಾರು 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin