ದೈಹಿಕ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

gubbi--college

ಗುಬ್ಬಿ, ಸೆ.17- ಜಿಲ್ಲೆಯ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ದೈಹಿಕ ಉಪನ್ಯಾಸಕರನ್ನು ತ್ವರಿತವಾಗಿ ಭರ್ತಿ ಮಾಡಲು ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದರು.ಪಟ್ಟಣದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಕಾಲೇಜು ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ತಾಲೂಕಿನ 21 ಕಾಲೇಜುಗಳಲ್ಲಿ ಕೇವಲ ನಾಲ್ಕು ಮಂದಿ ದೈಹಿಕ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಅತ್ಯವಶ್ಯಕವಾಗಿದ್ದು, ಕಾಲೇಜುಗಳಲ್ಲಿ ಖಾಲಿ ಇರುವ ದೈಹಿಕ ಉಪನ್ಯಾಸಕರನ್ನು ಭರ್ತಿ ಮಾಡಲು ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಜಿಪಂ ಸದಸ್ಯ ಎಚ್.ಟಿ.ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆಗಳು ಹೆಚ್ಚು ಸಹಕಾರಿಯಾಗಲಿದ್ದು, ಮಕ್ಕಳು ಶಿಕ್ಷಣದ ಜತೆಗೆ ವಿವಿಧ ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರಬರುವಂತೆ ಕರೆ ನೀಡಿದರು.ಪ್ರಾಚಾರ್ಯ ಕೆ.ಎಸ್.ಸಿದ್ದಲಿಂಗಪ್ಪ, ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಂ.ವಿ.ಬಸವರಾಜು ಮಾತನಾಡಿದರು.ಜಿಪಂ ಸದಸ್ಯ ಜಿ.ಎಚ್.ಜಗನ್ನಾಥ್, ತಾಪಂ ಉಪಾಧ್ಯಕ್ಷೆ ಮಮತಾ, ಪಪಂ ಸದಸ್ಯ ಸಿ.ಮೋಹನ್, ನಿರ್ದೇಶಕ ಜೆ.ವಿ.ಲೋಕೇಶ್, ಮುಖಂಡ ಎಸ್.ಡಿ.ದಿಲೀಪ್‍ಕುಮಾರ್, ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಶಂಕರ್, ಪ್ರಾಚಾರ್ಯ ಹೆಚ್.ಕೆ.ನರಸಿಂಹಮೂರ್ತಿ, ಚನ್ನಬಸವೇಶ್ವರ ಯುವಕ ಸಂಘದ ಕಾರ್ಯದರ್ಶಿ ಸಿ.ಆರ್.ಶಂಕರ್‍ಕುಮಾರ್ ಮುಂತಾದವರು ಭಾಗವಹಿಸಿದ್ದರು.
► Follow us on –  Facebook / Twitter  / Google+

Facebook Comments

Sri Raghav

Admin