‘ದೊಡ್ಮನೆ ಹುಡ್ಗ’ನ ಟ್ರೈಲರ್ ನೋಡಿ

ಈ ಸುದ್ದಿಯನ್ನು ಶೇರ್ ಮಾಡಿ

ಈಗಾಗಲೇ ಆಡಿಯೋ ಮೂಲಕ ಸದ್ದು ಮಾಡುತ್ತಿರುವ ‘ದೊಡ್ಮನೆ ಹುಡ್ಗ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ‘ದುನಿಯಾ’ ಸೂರಿ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಪಾರ್ವತಮ್ಮ ರಾಜ್ ಕುಮಾರ್ ಅವರು, ‘ದೊಡ್ಮನೆ ಹುಡ್ಗ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳನ್ನು ಶ್ರೀ ಸಿದ್ಧಗಂಗಾ ಸ್ವಾಮೀಜಿ, ಶಿವರಾಜ್ ಕುಮಾರ್, ಸುದೀಪ್, ಯಶ್ ಅವರು ರಿಲೀಸ್ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್, ಅಂಬರೀಶ್, ರಾಧಿಕಾ ಪಂಡಿತ್, ರವಿಶಂಕರ್ ಚಿಕ್ಕಣ್ಣ ಮೊದಲಾದವರು ನಟಿಸಿದ್ದಾರೆ. ಚಿತ್ರದ ಟ್ರೈಲರ್ ಕುತೂಹಲ ಮೂಡಿಸುತ್ತದೆ. ಈ ಹಿಂದೆ ‘ದುನಿಯಾ’ ಸೂರಿ ನಿರ್ದೇಶನದಲ್ಲಿ ‘ಜಾಕಿ’, ‘ಅಣ್ಣಾಬಾಂಡ್’ ಚಿತ್ರಗಳಲ್ಲಿ ಪುನೀತ್ ಅಭಿನಯಿಸಿದ್ದರು.

Facebook Comments

Sri Raghav

Admin