ದೋಸ್ತಿ ಗಟ್ಟಿಗೊಳಿಸಲು ಗೌಡರ ಜೊತೆ ವೇಣುಗೋಪಾಲ್ ಮಾತುಕತೆ

ಈ ಸುದ್ದಿಯನ್ನು ಶೇರ್ ಮಾಡಿ

Devegowda-Venugopal
ನವದೆಹಲಿ, ಅ.4- ರಾಜ್ಯದ ಕಾಂಗ್ರೆಸ್ ಜೆಡಿಎಸ್ ಮೈತ್ರಿಯನ್ನು ಗಟ್ಟಿಗೊಳಿಸುವ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಮಾತುಕತೆ ನಡೆಸಿರುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಎಸಿ.ವೇಣುಗೋಪಾಲ್ ತಿಳಿಸಿದ್ದಾರೆ.  ಇಂದು ಕರ್ನಾಟಕ ಭವನದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಬಗ್ಗೆ ಹಲವು ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ರಾಜಕಾರಣದಲ್ಲಿ ಯಾವುದೂ ಅಂತಿಮವಲ್ಲ ಎಂದರು.

ಕಾಂಗ್ರೆಸ್ ವಿರುದ್ಧ ಮಾಯಾವತಿ ಹೇಳಿಕೆ ಹಾಗೂ ಸಚಿವ ಎನ್.ಮಹೇಶ್ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ತಿಳಿಸಿದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದೊಂದೇ ನಮ್ಮ ಗುರಿ ಎಂದು ಹೇಳಿದರು.

Facebook Comments

Sri Raghav

Admin