ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಆರ್ಥಿಕ ಸುಧಾರಣೆ
ಕೆ.ಆರ್.ಪೇಟೆ,ಆ.18- ರಾಜ್ಯ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಜನರ ಆರ್ಥಿಕ ಮಟ್ಟ ಸುಧಾರಣೆಯಾಗಿದೆ ಎಂದು ಹಿರಿಯ ಸಹಕಾರಿ ಧುರೀಣ ಬಿ.ನಂಜಪ್ಪಅಭಿಪ್ರಾಯಪಟ್ಟರು.ಪಟ್ಟಣದ ಗ್ರಾಮಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಡೆಸುತ್ತಿರುವ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಒಂದಾಗಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಜಾಗೃತಿ ಬೆಳಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಜನ ಜಾಗೃತಿ ವೇದಿಕೆಯ ಆಧ್ಯಕ್ಷ ಕೆ ಎಸ್ ರಾಜೇಶ್ ವಹಿಸಿದ್ದರು. ಪುರಸಭಾ ಉಪಾಧ್ಯಕ್ಷೆ ಸೌಭಾಗ್ಯ ಅಶೋಕ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಎ ಯೋಗೀಶ್, ತಾಲೂಕು ಯೋಜನಾಧಿಕಾರಿ ಹೆಚ್.ಆರ್ ಲವಕುಮಾರ್, ಗ್ರಾಮಭಾರತಿ ವಿಧ್ಯಾಸಂಸ್ಥೆಯ ಆಧ್ಯಕ್ಷ ಕಿರಣ್, ಪ್ರಾಂಶುಪಾಲ ರಘುಪತಿ, ವೈದ್ಯಾಧಿಕಾರಿ ಡಾ.ಲೋಕೇಶ್, ರವರು, ಉಪನ್ಯಾಸಕ ಮಲ್ಲಿಕಾರ್ಜುನ್, ಮೇಲ್ವಿಚಾರಕ ಗಿರೀಶ್, ಶಿಕ್ಷಕರಾದ ವಜ್ರಪ್ರಸಾದ್, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.
► Follow us on – Facebook / Twitter / Google+