ಧಾರವಾಡ ಕಟ್ಟಡ ಕುಸಿತ ಪ್ರಕರಣ : ಲಕ್ನೋದಿಂದ ಎನ್‌ಡಿಆರ್‌ಎಫ್‌ ತಂಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾರ್ಚ್ 19- ಧಾರವಾಡದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಧಾರವಾಡ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಗಳೊಂದಿಗೆ ನೇರ ಸಂಪರ್ಕದಲ್ಲಿದ್ದು ಈ ವರೆಗೆ 2೮ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿ ದೆ .

ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆ ಮೇಲ್ವಿಚಾರಣೆ ನಡೆಸುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚಿಸಲಾಗಿದೆ.

ಲಕ್ನೋದಿಂದ 25 ಜನರ ಎನ್ ಡಿ ಆರ್ ಎಫ್ ತಂಡ ವಿಶೇಷ ವಿಮಾನದಲ್ಲಿ ಆಗಮಿಸಲಿದೆ. ಈಗಾಗಲೇ ಬೆಂಗಳೂರಿನಿಂದ ಐವರು ತಜ್ಞರ ತಂಡ ವಿಶೇಷ ವಿಮಾನದಲ್ಲಿ ತೆರಳಿದ್ದು ಈಗಾಗಲೇ ರಕ್ಷಣಾ ಕಾರ್ಯಾಚರಣೆ ಯಲ್ಲಿ ತೊಡಗಿಕೊಂಡಿದೆ.

25 ಜನರ ಇನ್ನೊಂದು ತಂಡವನ್ನು ಬಸ್ ನಲ್ಲಿ ಕಳುಹಿಸಲಾಗಿದ್ದು ಇನ್ನು ಎರಡು ಗಂಟೆಗಳಲ್ಲಿ ತಲುಪುವ ನಿರೀಕ್ಷೆ ಇದೆ. ಇನ್ನು ಈ ದುರಂತದಲ್ಲಿ ಈ ವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin