ಧಾರವಾಡ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ, ಏ.8- ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು , ರಾಜ್ಯ ರಸ್ತೆ ಸಾರಿಗೆ ಬಸ್ಸೊಂದು ಟವೇರಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು , 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ನಿಗದಿ ಬಳಿಯ ಮುರಕಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಧಾರವಾಡದ ಕಂಠಿಗಲ್ಲಿಯ ಇಮ್ರಾನ್ ಮಕಾಂನದಾರ (38) ಅಫ್ರನ್ ಮಕಾಂನದಾರ (28) ,ಆಯೆಷಾ (4) ಎಂದು ಗುರುತಿಸಲಾಗಿದ್ದು , ಚಾಲಕನ ಹೆಸರು ತಿಳಿದು ಬಂದಿಲ್ಲ.

Accidengt--05

ಎರಡು ಕುಟುಂಬದವರು ಸೇರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರವಾಸಕ್ಕೆ ಹೊರಟಿದ್ದರು. ಬೆಳಗ್ಗೆ ರಾಜ್ಯ ರಸ್ತೆ ಸಾರಿಗೆ ಬಸ್ಸೊಂದು ಟವೇರಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಉಳಿದ 6 ಜನರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡ 6 ಜನರಲ್ಲಿ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಜಿಲಾನಿಯಾ ಅವರ ಪತ್ನಿ ಎಂದು ತಿಳಿದು ಬಂದಿದೆ.  ಘಟನಾ ಸ್ಥಳಕ್ಕೆ ತೆರಳಿದ ಅಳ್ನಾವರ ಪೆÇಲೀಸರು ಸಾರಿಗೆ ಬಸ್‍ನ ಚಾಲಕನ ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Accidengt--04

Accidengt--03

Accidengt--02

 

Facebook Comments

Sri Raghav

Admin