ನಕ್ಸಲರು ಹುದುಗಿಸಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಬಾಲಕಿ ಸೇರಿ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ
ಸಾಂಧರ್ಭಿಕ ಚಿತ್ರ
ಸಾಂಧರ್ಭಿಕ ಚಿತ್ರ

ರಾಯ್‍ಪುರ್, ಜ.19-ನಕ್ಸಲೀಯರು ಹುದುಗಿಸಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಬಾಲಕಿಯೊಬ್ಬಳು ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಛತ್ತೀಸ್‍ಗಢದ ನಕ್ಸಲ್ ಹಾವಳಿ ಪೀಡಿತ ನಾರಾಯಣಪುರ್ ಜಿಲ್ಲೆಯ ದಟ್ಟಡವಿಯಲ್ಲಿ ನಡೆದಿದೆ. ನಾರಾಯಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ನಕ್ಸಲರು ಅಡಗಿಸಿಟ್ಟಿದ್ದ ನೆಲಬಾಂಬ್ ಸ್ಫೋಟಗೊಂಡು ಓರ್ವ ಬಾಲಕಿ ಮತ್ತು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮಹಾ ನಿರೀಕ್ಷಿಕ (ಬಸ್ತಾರ್ ವಲಯ) ಎಸ್.ಆರ್.ಪಿ. ಕಲ್ಲೂರಿ ತಿಳಿಸಿದ್ದಾರೆ.

ಸೋನ್‍ಪುರ್ ಮತ್ತು ಕುರುಶ್‍ನರ್ ಗ್ರಾಮಗಳ ನಡುವೆ ರಸ್ತೆ ನಿರ್ಮಾಣವಾಗುತ್ತಿದ್ದ ಪ್ರದೇಶದ ಮೂಲಕ ತುಮ್ನಾರ್ ಗ್ರಾಮದ ಕೆಲವು ಮಹಿಳೆಯರು ಮತ್ತು ಮಕ್ಕಳೂ ಹಾದು ಹೋಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿತು ಎಂದು ಅವರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin