ನಗರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

hiriyuru

ಹಿರಿಯೂರು, ಆ.23-ರಸ್ತೆ ಬದಿ ವ್ಯಾರಸ್ಥರು ಮತ್ತು ಅಂಗಡಿಗಳಲ್ಲಿನ ವಸ್ತುಗಳನ್ನು ನಗರಸಭೆ ಅಧಿಕಾರಿಗಳು ಬೀದಿಗೆ ಬಿಸಾಡುವ ಪ್ರವೃತ್ತಿಯನ್ನು ಕೈ ಬಿಡಬೇಕೆಂದು ಒತ್ತಾಯಿಸಿ ರಸ್ತೆ ಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿಭಟನೆ ಹಮ್ಮಿಕೊಂಡಿತು.ಪಟ್ಟಣದ ರಸ್ತೆಬದಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ ಪುಟ್‍ಪಾತ್ ವ್ಯಾಪಾರಿಗಳು ನಗರಸಭೆ ಆಯುಕ್ತ ಹಾಗೂ ನಗರಸಭೆ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅಧ್ಯಕ್ಷ ಎ.ಗಂಗಾದರ್, ಪ್ರತಿದಿನ ವ್ಯಾಪಾರ ಮಾಡಿದರೆ ಮಾತ್ರ ನಮ್ಮ ಜೀವನ ನಡೆಯಲು ಸಾಧ್ಯ. ಆದ್ದರಿಂದ, ನಗರ ಸಭೆಯವರು ನಮಗೆ ವ್ಯಾಪಾರಕ್ಕೆ ಸೂಕ್ತ ಸ್ಥಳ ದೊರೆಕಿಸಿಕೊಟ್ಟು ನೆಮ್ಮದಿಯ ಜೀವನವನಕ್ಕೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಸಂಘಟನೆ ಮುಖಂಡರಾದÀ ಆನಂದ್, ಶಂಕರಭಾಗವತ, ರಹಮತ್‍ಉಲ್ಲಾ, ಸಾಧಿಕ್‍ಉಲ್ಲಾ ಮತ್ತಿತರರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin